ರಾಷ್ಟ್ರೀಯ

ಸರ್ಕಾರಿ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ!

Pinterest LinkedIn Tumblr


ನಾಗ್ಪುರ: ಸರ್ಕಾರಿ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾದ ಪ್ರಕರಣವೊಂದು ರಾಜಸ್ಥಾನದ ನಾಗ್ಪುರ ಜಿಲ್ಲೆಯಲ್ಲಿ ಕಳೆದ ಭಾನುವಾರ ಬೆಳಕಿಗೆ ಬಂದಿದೆ.

ಆರೋಪಿಯನ್ನು ಖಾಸಗಿ ಕಾಲೇಜಿನ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು, ಆತನ ಮೇಲೆ ಎಫ್​ಐಆರ್​ ದಾಖಲಿಸಲಾಗಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರ ನಡೆದಿದೆ ಎನ್ನಲಾದ ಕಾಲೇಜು ಕೊಠಡಿಯನ್ನು ತನಿಖೆಯ ಉದ್ದೇಶಕ್ಕಾಗಿ ಪೊಲೀಸರು ಬಂದ್​ ಮಾಡಿಸಿದ್ದು, ಕಾಲೇಜಿನಲ್ಲಿರುವ ಸಿಸಿಟಿವಿ ವಿಡಿಯೋಗಳನ್ನು ವಶಕ್ಕೆ ಪಡೆದಿದ್ದಾರೆ.

ಇತ್ತೀಚೆಗಷ್ಟೇ ರಾಜಸ್ಥಾನದ ಜಲ್ವಾರ್​ ಪ್ರದೇಶದಲ್ಲಿ ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. ಈ ಘಟನೆಯ ಬಳಿಕವೇ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.

12 ವರ್ಷ ಮೇಲ್ಪಟ್ಟ ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ರಾಜಸ್ಥಾನ ಸರ್ಕಾರ ಕಳೆದ ಮಾರ್ಚ್​ ತಿಂಗಳಲ್ಲಿ ಮಸೂದೆಯನ್ನು ಹೊರಡಿಸಿತ್ತು

Comments are closed.