ಪುಣೆ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಅದ್ಭುತವಾಗಿ ಕ್ಯಾಚ್ ಹಿಡಿದಿದ್ದಾರೆ.
https://www.facebook.com/IndianCricketTeam/posts/2084645584890457
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಇದರೊಂದಿಗೆ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಮಾಡಿದ್ದು ಬುಮ್ರಾ ಎಸೆತದಲ್ಲಿ ಬ್ಯಾಟ್ಸ್ ಮನ್ ಹೇಮ್ರಾಜ್ ಶಾಟ್ ಹೊಡೆಯಲು ಮುಂದಾದರೂ ಆದರೆ ಚೆಂಡು ಬ್ಯಾಟ್ ಗೆ ತಲುಗಿ ಕೀಪರ್ ಹಿಂದೆ ಹೋಯಿತು.
ಈ ವೇಳೆ ಎಂಎಸ್ ಧೋನಿ ಸುಮಾರು 40 ಮೀಟರ್ ನಷ್ಟು ದೂರ ಓಡಿ ಡೈವ್ ಮಾಡಿ ಅದ್ಭುತವಾಗಿ ಕ್ಯಾಚ್ ಹಿಡಿದರು. ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
Comments are closed.