ಉಡುಪಿ: ನಾಳೆ ಸರಕಾರ ನಡೆಸಲು ಉದ್ದೇಶಿಸಿರುವ ಟಿಪ್ಪು ಜಯಂತಿ ಆಚರಣೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತಿರುವ ಬೆನ್ನಲ್ಲೇ ವಿವಿದೆಡೆ ಜಿಲ್ಲೆಯ ಟಿಪ್ಪು ಜಯಂತಿಯ ಆಮಂತ್ರಣ ಪತ್ರಗಳಲ್ಲಿ ಬಿಜೆಪಿ ಶಾಸಕರ ಹೆಸರುಗಳು ಕಂಡುಬಂದಿದ್ದು ಕಾರ್ಯಕರ್ತರಲ್ಲಿ ಗೊಂದಲ ಮೂಡಿದೆ.
ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ವತಿಯಿಂದ ಮಣಿಪಾಲದ ರಜತಾದ್ರಿಯಲ್ಲಿ ನಡೆಸಲಿರುವ ಟಿಪ್ಪು ಜಯಂತಿಯ ಆಮಂತ್ರಣ ಪತ್ರದಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಹೆಸರಿದೆ. ಅಷ್ಟೇ ಅಲ್ಲ ಶಾಸಕರ ಅಧ್ಯಕ್ಷತೆಯಲ್ಲಿ ಟಿಪ್ಪು ಜಯಂತಿ ನಡೆಯಲಿದೆ. ಟಿಪ್ಪು ಜಯಂತಿಯ ಬಗ್ಗೆ ತೀವೃ ವಿರೋಧ ವ್ಯಕ್ತ ಪಡಿಸುತ್ತಿರುವ ಬಿಜೆಪಿಯ ಸಂಸದೆ ಶೋಭಾ ಕರಂದ್ಲಾಜೆ ಹೆಸರೂ ಇದೆ. ಕ್ಷೇತ್ರದ ಬಿಜೆಪಿ ಪಕ್ಷದ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಸುಕುಮಾರ ಶೆಟ್ಟಿ, ಲಾಲಾಜಿ ಮೆಂಡನ್ ಅವರ ಹೆಸರುಗಳು ಕಾಣಿಸಿಕೊಂಡಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜಯಾಮಾಲ ನಡೆಸಿಕೊಳ್ಳಲಿದ್ದಾರೆ. ಕಾರ್ಯಕ್ರಮ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನವೆಂಬರ್ 10 ರಂದು 10.30 ಗಂಟೆಗೆ ನಡೆಯಲಿದೆ. ಆಹ್ವಾನಿತರು ಯಾರೆಲ್ಲಾ ನಾಳಿನ ಕಾರ್ಯಕ್ರಮದಲ್ಲಿ ಪಾಲ್ಘೊಳ್ಳುತ್ತಾರೆಂಬುದು ಕಾದು ನೋಡಬೇಕಿದೆ.
Comments are closed.