(ಕಡತ ಚಿತ್ರ)
ಮಂಗಳೂರು, ನವೆಂಬರ್.14: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಇಂದು ಸಂಜೆ 4:30ಕ್ಕೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ಸಂಘನಿಕೇತನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ.
ಬುಧವಾರ ಸಂಜೆ ವಿಮಾನ ನಿಲ್ದಾಣದಿಂದ ನೇರವಾಗಿ ದಿ ಓಶಿಯನ್ ಪರ್ಲ್ ಹೊಟೇಲ್‌ಗೆ ತೆರಳಿ ವಿಶ್ರಾಂತಿ ಪಡೆಯಲಿದ್ದಾರೆ. ಬಳಿಕ ಸಂಘನಿಕೇತನದಲ್ಲಿ ನಡೆಯುವ ಬೈಠಕ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ಆನಂತರ ಮಂಗಳೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ನ.15ರಂದು ಬೆಳಗ್ಗೆ 7 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ವಾಪಸಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
Comments are closed.