ಕರ್ನಾಟಕ

ನಾಳೆ ಕುಮಾರಸ್ವಾಮಿ 59ನೇ ಹುಟ್ಟು ಹಬ್ಬ

Pinterest LinkedIn Tumblr


ಬೆಂಗಳೂರು: ನಾಳೆ ಮುಖ್ಯಮಂತ್ರಿ ಎಚ್​ ಡಿ ಕುಮಾರಸ್ವಾಮಿ ಅವರು ತಮ್ಮ 59 ನೇ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಲು ನಿರ್ಧರಿಸಿದ್ದಾರೆ.

ತಮ್ಮ ಜನ್ಮದಿನವಾದ ಡಿಸೆಂಬರ್ 16 ರಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬದವರೊಂದಿಗೆ ಸಮಯ ಕಳೆಯಲಿದ್ದಾರೆ. ತಮ್ಮ ಜನ್ಮದಿನದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಫ್ಲೆಕ್ಸ್, ಬ್ಯಾನರ್ ಹಾಕದಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ನಿಮ್ಮ ಶುಭ ಹಾರೈಕೆಗಳೇ ನನಗೆ ಶ್ರೀರಕ್ಷೆ. ಫ್ಲೆಕ್ಸ್ ಬ್ಯಾನರ್ ಅಳವಡಿಸಿ ಊರಿನ ಅಂದ ಹಾಳು ಮಾಡಬೇಡಿ. ಪರಿಸರ ಕಾಳಜಿ ಮೆರೆದಲ್ಲಿ ಅದೇ ಅತ್ಯುತ್ತಮ ಸಂದೇಶ ಎಂದು ಅವರು ವಿನಂತಿಸಿದ್ದಾರೆ.

ರಾಜ್ಯದಲ್ಲಿ ನಡೆದ ಕೆಲವು ದುರ್ಘಟನೆಗಳಿಂದ ನಾನು ಮಾನಸಿಕವಾಗಿ ನೊಂದಿದ್ದೇನೆ. ಆದ್ದರಿಂದ ನನ್ನ ಹುಟ್ಟಿದ ದಿನವನ್ನು ಸಾರ್ವಜನಿಕವಾಗಿ ಸಂಭ್ರಮಿಸುವ ಮನಸ್ಥಿತಿಯಲ್ಲಿ ನಾನಿಲ್ಲ ಎಂದು ತಮ್ಮ ಟ್ವೀಟ್​ ನಲ್ಲಿ ಬರೆದು ಕೊಂಡಿದ್ದಾರೆ

ರಾಜ್ಯದಲ್ಲಿ ನಡೆದ ಕೆಲವು ದುರ್ಘಟನೆಗಳಿಂದ ನಾನು ಮಾನಸಿಕವಾಗಿ ನೊಂದಿದ್ದೇನೆ. ಆದ್ದರಿಂದ ನನ್ನ ಹುಟ್ಟಿದ ದಿನವನ್ನು ಸಾರ್ವಜನಿಕವಾಗಿ ಸಂಭ್ರಮಿಸುವ ಮನಸ್ಥಿತಿಯಲ್ಲಿ ನಾನಿಲ್ಲ. ಹಿತೈಷಿಗಳ ಹಾರೈಕೆಯೇ ನನಗೆ ಶ್ರೀರಕ್ಷೆ. ನಾಳೆ ನನ್ನ ಕುಟುಂಬದೊಡನೆ ಇರುತ್ತೇನೆ.

Comments are closed.