ನವದೆಹಲಿ: ಛತ್ತೀಸ್ ಗಡ್ ದ ಮುಖ್ಯಮಂತ್ರಿಯಾಗಿ ಭೂಪೇಶ್ ಬಾಘೇಲ್ ಆಯ್ಕೆಯಾಗಿದ್ದಾರೆ. ಭಾನುವಾರದಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರವನ್ನು ಘೋಷಿಸಲಾಯಿತು.
ಮುಖ್ಯಮಂತ್ರಿ ಹುದ್ದೆಗೆ ಸ್ಪರ್ಧೆಯಲ್ಲಿದ್ದ ಟಿ.ಎಸ್. ಸಿಂಗ್ ದೇವ್, ತಮರಾಧ್ವಾಜ್ ಸಾಹು, ಭೂಪೇಶ್ ಬಾಗೇಲ್ ಮತ್ತು ಚರಣ್ ದಾಸ್ ಮಹಾಂತ್ ಅವರ ಮಧ್ಯದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಭೂಪೇಶ್ ಬಾಗೇಲ್ ಅವರಿಗೆ ಪಕ್ಷ ಮಣೆ ಹಾಕಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶನಿವಾರದಂದು ತಮ್ಮ ದೆಹಲಿಯ ನಿವಾಸದಲ್ಲಿ ನಾಲ್ಕು ಮುಖಂಡರೊಂದಿಗೆ ಚರ್ಚೆ ನಡೆಸಿದ್ದರು. ಕಾಂಗ್ರೆಸ್ ಕೇಂದ್ರೀಯ ವೀಕ್ಷಕ ಮಲ್ಲಿಕಾರ್ಜುನ ಖರ್ಗೆ ಮತ್ತು ಛತ್ತೀಸ್ ಗಡ್ ಉಸ್ತುವಾರಿ ಪಿ.ಪಿ. ಪುನಿಯಾ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಸಹಿತ ಸಭೆಯಲ್ಲಿ ಭಾಗವಹಿಸಿದ್ದರು ಎಂದು ವರದಿಗಳು ತಿಳಿಸಿದ್ದವು.
ಈಗ ರಾಯಪುರ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಲ್ಲಿಕಾರ್ಜುನ್ ಖರ್ಗೆ ಮತ್ತು ಪಿಎಲ್ ಪುನಿಯಾ ಜಿ ಅವರ ಸಮ್ಮುಖದಲ್ಲಿ ಭೂಪೇಶ್ ಬಾಘೇಲ್ ರನ್ನು ಛತ್ತೀಸ್ ಗಡ್ ನೂತನ ಮುಖ್ಯಮಂತ್ರಿಯಾಗಿ ಘೋಷಿಸಲಾಯಿತು.
Comments are closed.