ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 52 ನೇ ಕಣ್ಣೂರು ವಾರ್ಡಿನ ಬಳ್ಳೂರು ಪ್ರದೇಶದಲ್ಲಿ ರಸ್ತೆ ಅಗಲೀಕರಣಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಗುದ್ದಲಿ ಪೂಜೆ ನೆರವೇರಿಸಿದರು. ಕೇಂದ್ರ ಸರಕಾರದ ಹದಿನಾಲ್ಕನೇ ಫೈನಾನ್ಸ್ ಅನುದಾನದಲ್ಲಿ ಐದು ಲಕ್ಷ ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ.
ಶಾಸಕರೊಂದಿಗೆ ಮನಪಾ ಸದಸ್ಯ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ವಾರ್ಡ್ ಅಧ್ಯಕ್ಷ ವಿಶ್ವನಾಥ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ವಸಂತ ಜೆ ಪೂಜಾರಿ, ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಸಂದೀಪ್ ಗರೋಡಿ, ಮಾಜಿ ಪಂಚಾಯತ್ ಸದಸ್ಯ ಶ್ರೀಧರ್ ಭಂಡಾರಿ, ಬಿಜೆಪಿ ಮುಖಂಡರಾದ ಗೀತಾನಂದ ಶೆಟ್ಟಿ, ಯುವರಾಜ್ ಕಣ್ಣೂರು ಸಹಿತ ಸ್ಥಳೀಯರು ಉಪಸ್ಥಿತರಿದ್ದರು.
Comments are closed.