ಕರ್ನಾಟಕ

ಸಂಧ್ಯಾ ಸುರಕ್ಷಾ ಯೋಜನೆಯಡಿ ಹಿರಿಯ ನಾಗರಿಕರಿಗೆ ಸಿಹಿಸುದ್ದಿ

Pinterest LinkedIn Tumblr

ಬೆಂಗಳೂರು,ಫೆ.8:ಈ ಬಾರಿಯ ಬಜೆಟ್‍ನಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಂಧ್ಯಾ ಸುರಕ್ಷಾ ಯೋಜನೆಯಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿದ್ದ ಮಾಸಾಶನವನ್ನು 600ರಿಂದ 1000 ರೂ.ಗೆ ಹೆಚ್ಚಳ ಮಾಡಿದ್ದಾರೆ.

ವಿಧಾನಸಭೆಯಲ್ಲಿಂದು 2019-20ನೇ ಸಾಲಿನ ಆಯವ್ಯಯ ಮಂಡಿಸಿದ ಅವರು, ದುರ್ಬಲ ವರ್ಗದವರಿಗೆ ಸಾಮಾಜಿಕ ಭದ್ರತೆ ಒದಗಿಸುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಸಂದ್ಯಾಸುರಕ್ಷಾ ಯೋಜನೆಯಡಿ ನೀಡುತ್ತಿದ್ದ ಮಾಸಾಶನವನ್ನು 600ರಿಂದ 1000 ರೂ.ಗೆ ಏರಿಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಇದೇ ವೇಳೆ ಬಡ ಕುಟುಂಬದ ಗರ್ಭಿಣಿ ಯರಿಗೆ ಆರ್ಥಿಕ ನೆರವು ನೀಡುವ ಮುಖ್ಯಮಂತ್ರಿಗಳ ಮಾತೃಶ್ರೀ ಯೋಜನೆಯನ್ನು ಪ್ರಕಟಿಸಿದ್ದಾರೆ. ಈ ನೂತನ ಯೋಜನೆ ಪ್ರಕಾರ ಬಡಕುಟುಂಬಗಳ ಗರ್ಭಿಣಿಯರ ಹೆರಿಗೆ ಪೂರ್ವದ ಮೂರು ತಿಂಗಳು ಹಾಗೂ ಹೆರಿಗೆ ನಂತರ ಮೂರು ತಿಂಗಳು ಮಾಸಿಕ ಒಂದು ಸಾವಿರದಂತೆ 6000 ರೂ.ಗಳ ಆರ್ಥಿಕ ನೆರವು ನೀಡಲಾಗುವುದು ಎಂದು ತಿಳಿಸಿದರು.

2018 ನವೆಂಬರ್ 1ರಿಂದ ಈ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, ಈವರೆಗೂ 18,430 ಫಲಾನುಭವಿಗಳು ಸೌಲಭ್ಯ ಪಡೆದಿದ್ದಾರೆ ಎಂದು ವಿವರಿಸಿದರು.

Comments are closed.