ಕರಾವಳಿ

ಮುಖ್ಯ ಮಂತ್ರಿ ಕುಮಾರ ಸ್ವಾಮಿ ನಾಳೆ ಮಂಗಳೂರಿಗೆ..

Pinterest LinkedIn Tumblr

ಮಂಗಳೂರು ಫೆಬ್ರವರಿ 8: ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ನಾಳೆ ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲ್ಲಿರುವರು.

ಫೆಬ್ರವರಿ 9 ರಂದು ಪೂರ್ವಾಹ್ನ ರಸ್ತೆ ಮೂಲಕ ಶೃಂಗೇರಿಯಿಂದ ಧರ್ಮಸ್ಥಳಕ್ಕೆ ಆಗಮಿಸಿ, 11 ಗಂಟೆಗೆ ಅಮೃತ ವರ್ಷಿಣಿ ಸಭಾಭವನ ಧರ್ಮಸ್ಥಳ ಇಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಶ್ರೀ ಬಾಹುಬಲಿಯ ಮಹಾಮಸ್ತಕಾಭಿಷೇಕ ಮಹೋತ್ಸವ-2019ರ ಅಂಗವಾಗಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.

ಚತುಷ್ಪಥ ರಸ್ತೆಯ ಪ್ರಥಮ ಹಂತದ ಉದ್ಘಾಟನೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕರ್ನಾಟಕ ಸರ್ಕಾರದೊಂದಿಗೆ ಕೆರೆ ಸಂಜೀವಿನಿ ಕಾರ್ಯಕ್ರಮದ ಒಡಂಬಡಿಕೆಯಲ್ಲಿ ಪಾಲ್ಗೊಳ್ಳುವರು. ಅಪರಾಹ್ನ 1.30 ಗಂಟೆಗೆ ಧರ್ಮಸ್ಥಳದಿಂದ ಮಂಗಳೂರಿಗೆ ರಸ್ತೆ ಮೂಲಕ ಆಗಮಿಸಿ 3 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ತೆರಳುವರು.

Comments are closed.