ಬೆಂಗಳೂರು: ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಅತೃಪ್ತ ಶಾಸಕರು ಗೈರಾದ ಹಿನ್ನೆಲೆಯಲ್ಲಿ ಮುಂದಿನ ರಾಜಕೀಯ ನಡೆಯ ಬಗ್ಗೆ ಚರ್ಚೆ ಮಾಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ. ಹೈಕಮಾಂಡ್ ಬುಲಾವ್ ನೀಡಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ.
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಗ ಪಕ್ಷದ ಮುಖಂಡರ ಸಭೆಯಲ್ಲಿ ಸಿದ್ಧರಾಮಯ್ಯ ಭಾಗಿಯಾಗಲಿದ್ದಾರೆ. ಸಿಎಲ್ಪಿ ಸಭೆಗೆ ರೆಬೆಲ್ಸ್ ಶಾಸಕರು ಗೈರಾದ ವಿಚಾರಕ್ಕೆ ಹೈಕಮಾಂಡ್ ಅಸಮಾಧಾನಗೊಂಡಿದೆ. ಮೈತ್ರಿ ಸರ್ಕಾರದಲ್ಲಾಗುತ್ತಿರುವ ಬೆಳವಣಿಗೆ ಮಾಹಿತಿ ಪಡೆಯಲು ಹಾಗೂ ಮುಂದಿನ ನಡೆಯ ಬಗ್ಗೆ ಇದೇ ವೇಳೆ ಚರ್ಚಿಸಲಿದೆ.
ಸಮ್ಮಿಶ್ರ ಸರ್ಕಾರದ ಎರಡನೇ ಬಜೆಟ್ ಇಂದು ಮಂಡನೆಯಾಯಿತು. ಆಯವ್ಯಯ ಮಂಡನೆಗೂ ಮುನ್ನ ಕಾಂಗ್ರೆಸ್ ಶಾಸಕರನ್ನು ಅಧಿವೇಶನಕ್ಕೆ ಬರಮಾಡಿಕೊಳ್ಳಲು ಇಂದು ಸಿಎಲ್ಪಿ ಸಭೆ ನಡೆಸಿತ್ತು. ಸಭೆಗೆ ಗೈರಾದರೆ ಶಾಸಕ ಸ್ಥಾನದಿಂದ ಅನರ್ಹಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದರೂ ಅತೃಪ್ತ ಶಾಸಕರು ಸಭೆಗೆ ಗೈರಾದರು. ಮುಂದಿನ ದಿನಗಳಲ್ಲಿ ಅತೃಪ್ತ ಶಾಸಕರ ವಿರುದ್ಧ ಯಾವ ಕ್ರಮ ತೆಗೆದುಕೊಳ್ಳಬಹುದು ಎಂಬುದನ್ನು ಕಾಂಗ್ರೆಸ್ ಅಧ್ಯಕ್ಷ ನಾಳೆ ರಾಹುಲ್ ಗಾಂಧಿ ನಿರ್ಧರಿಸುವ ಸಾಧ್ಯತೆ ಇದೆ.
Comments are closed.