ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ ಮಾಡಲಿದೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಪಿ. ಪರಮೇಶ್ವರ್ ಬಿಎಸ್ಪಿ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ.
ಮೂಲತಃ ಮೂಡಿಗೆರೆಯವರಾದ ಪರಮೇಶ್ವರ್ ವಕೀಲರಾಗಿದ್ದು ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದವರು. ಮಾ.೨೬ ಮಂಗಳವಾರ ಇವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಎಸ್ಪಿ ಉಡುಪಿ ಜಿಲ್ಲಾಧ್ಯಕ್ಷ ಉದಯ್ ಕುಮಾರ್ ತಲ್ಲೂರು ತಿಳಿಸಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ೨೮ ಕ್ಷೇತ್ರಗಳಲ್ಲಿಯೂ ಬಿಎಸ್ಪಿ ಸ್ಪರ್ಧೆ ಮಾಡಲಿದೆ.
ಇನ್ನು ಲೋಕ್ಸಭಾ ಕ್ಷೇತ್ರದ ರಣ ಕಣದಲ್ಲಿ ಬಿಜೆಪಿಯಿಂದ ಶೋಭಾ ಕರಂದ್ಲಾಜೆ, ಜೆಡಿಎಸ್ ಕಾಂಗ್ರೆಸ್ ಮೈತ್ರಿಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಇದ್ದಾರೆ.
Comments are closed.