ಕೋಲಾರ: ಲೋಕಸಭಾ ಚುನಾವಣಾ ಪ್ರಚಾರಕ್ಕೆಂದು ಇಂದು ವಿಶೇಷ ಹೆಲಿಕಅಪ್ಟರ್ನಲ್ಲಿ ಬಂದಿಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಹೆಲಿಕಾಪ್ಟರ್ ಜೊತೆಗೆ ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಪೊಲೀಸರು ಮುಗಿಬಿದ್ದರು.
ಮಾಲೂರಿನ ಹೊರವಲಯದ ಗ್ರೀನ್ ಸಿಟಿ ಶಾಲಾ ಆವರಣಕ್ಕೆ ಹೆಲಿಕಾಪ್ಟರ್ನಲ್ಲಿ ಆಗಮಿಸಿದ ಯಡಿಯೂರಪ್ಪ ಬಿಜೆಪಿ ಅಭ್ಯರ್ಥಿ ಎಸ್. ಮುನಿಸ್ವಾಮಿ ಪರವಾಗಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದರು. ಬೆಂಗಳೂರಿನಿಂದ ಅತ್ಯಾಧುನಿಕ ತಂತ್ರಜ್ಞಾನದ ಕಪ್ಪು ಬಣ್ಣದ ಹೆಲಿಕಾಪ್ಟರ್ನಲ್ಲಿ ಬಂದ ಯಡಿಯೂರಪ್ಪ ಸಭೆಯಲ್ಲಿ ಭಾಗವಹಿಸಲು ತೆರಳಿದರು. ಹೆಲಿಕಾಪ್ಟರ್ ಭದ್ರತೆ ಮತ್ತು ಕರ್ತವ್ಯನಿರತ ಪೇದೆಗಳು ಆ ಹೆಲಿಕಾಪ್ಟರ್ ಜೊತೆಗೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸಂತಸಪಟ್ಟರು.
ಕೋಲಾರದಲ್ಲಿ ಹಾಲಿ ಸಂಸದ ಕೆ.ಎಚ್. ಮುನಿಯಪ್ಪ ಕಾಂಗ್ರೆಸ್ ಅಭ್ಯರ್ಥಿಯಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಕಣಕ್ಕಿಳಿಯಲಿದ್ದಾರೆ. ಅವರಿಗೆ ಎದುರಾಳಿಯಾಗಿ ಬಿಜೆಪಿಯಿಂದ ಎಸ್. ಮುನಿಸ್ವಾಮಿ ಸ್ಪರ್ಧಿಸಲಿದ್ದಾರೆ. ಆಡುಗೋಡಿಯ ಬಿಬಿಎಂಪಿ ಸದಸ್ಯರಾಗಿರುವ ಮುನಿಸ್ವಾಮಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ.
Comments are closed.