ಮಂಗಳೂರು: ನೆಲ್ಯಾಡಿ ಸಮೀಪದ (ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ) ಕೊಕ್ಕಡದಲ್ಲಿ ಸೋಮವಾರ ಬೆಳಗ್ಗೆ ನಡೆದ ಸರಣಿ ಅಪಘಾತದಲ್ಲಿ ಐದು ಮಂದಿ ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ ಮಾರುತಿ ಸ್ವಿಫ್ಟ್ ಡಿಸೈರ್ ಹಾಗೂ ಪುತ್ತೂರಿನ ರಿಜಿಸ್ಟ್ರೇಶನ್ ಹೊಂದಿರುವ ಮಾರುತಿ ಸಿಲರಿಯೊ ಕಾರುಗಳ ಮಧ್ಯೆ ಅಪಘಾತ ಉಂಟಾಗಿದೆ. ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಎರಡೂ ವಾಹನದ ಮುಂಭಾಗ ಜಖಂಗೊಂಡಿದೆ.
ಆಯಂಬುಲೆನ್ಸ್ ಗೆ ಸೈಡ್ ಕೊಡಲು ಪ್ರಯತ್ನಿಸಿದಾಗ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಆಯಂಬುಲೆನ್ಸ್ ಕೂಡ ಈ ಎರಡು ಕಾರುಗಳ ನಡುವೆ ಸಿಲುಕಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಸ್ಥಳೀಯ ಠಾಣಾ ಪೊಲೀಸರು ಬೇಟಿ ನೀಡಿ ಮುಂದಿನ ಕ್ರಮಕೈಗೊಂಡಿದ್ದಾರೆ.
Comments are closed.