ಕರ್ನಾಟಕ

ಕುಂದಗೋಳ ವಿಧಾನಸಭೆ ಉಪಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ

Pinterest LinkedIn Tumblr

ಕುಂದಗೋಳ: ತೀವ್ರ ಕುತೂಹಲ ಕೆರಳಿಸಿದ್ದ ಕುಂದಗೋಳ ವಿಧಾನಸಭೆ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಮಾಜಿ ಸಚಿವ ಸಿ.ಎಸ್ ಶಿವಳ್ಳಿ ಅವರ ಪತ್ನಿ ಕುಸುಮಾವತಿ ಶಿವಳ್ಳಿ ಗೆಲುವು ಸಾಧಿಸಿದ್ದಾರೆ.

ಒಟ್ಟು 17 ಸುತ್ತುಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಿತು, ಆರಂಭದಿಂದಲೂ ಮುನ್ನಡೆ ಸಾಧಿಸಿದ್ದ ಕುಸುಮಾ ಶಿವಳ್ಳಿ ಕೊನೆಯ ಎರಡು ಸುತ್ತುಗಳಲ್ಲಿ ಹಿನ್ನಡೆ ಅನುಭವಿಸಿದ್ದರು, ಅಂತಿಮ ಹಂತದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ನಾಯಕ ಸಚಿವ ಸಿ.ಎಸ್ ಶಿವಳ್ಳಿ ಅವರ ಅಕಾಲಿಕ ಮರಣದಿಂದ ತೆರವಾಗಿದ್ದ ಶಾಸಕ ಸ್ಥಾನಕ್ಕೆ ನಡೆದ ಉಪ ಚನಾವಣೆಯಲ್ಲಿ ಕುಸುಮಾವತಿ ವಿರುದ್ಧ ಬಿಜೆಪಿಯ ಎಸ್ ಐ ಚಿಕ್ಕಣ್ಣನವರ್ ಸ್ಪರ್ದಿಸಿದ್ದರು, ಮೇ 19 ರಂದು ಕುಂದಗೋಳ ಮತ್ತ ಚಿಂಚೋಳಿಯಲ್ಲಿ ಮತದಾನ ನಡೆದಿತ್ತು.

Comments are closed.