ಆರೋಗ್ಯ

ದೇಹದಲ್ಲಿನ ವಾತ-ಪಿತ್ತ ನಾಶಗೊಳಿಸಿ ಹೃದಯಕ್ಕೆ ಹಿತನೀಡುವ ಹಣ್ಣು ಯಾವುದು ಗೋತ್ತೆ?

Pinterest LinkedIn Tumblr

· ಅಜೀರ್ಣದ ಸಮಸ್ಯೆಯಿಂದ ಬಳಲುತ್ತಿರುವವರು ಏಲಕ್ಕಿ ಸೇವಿಸಿದರೆ ಶಮನಗೊಳ್ಳುವುದು. ಏಲಕ್ಕಿ ಯಿಂದ ಆಹಾರ ಜೀರ್ಣವಾಗಿ ಬಾಯಿಗೆ ರುಚಿಯುಂಟಾಗುತ್ತದೆ.
· ಪ್ರತಿದಿನ ಊಟದ ನಂತರ ಸೀತಾಫಲ ಹಣ್ಣನ್ನು ಸೇವಿಸುವುದರಿಂದ ಜೀರ್ಣಶಕ್ತಿ ಹೆಚ್ಚುವುದು.
· ಮಾವಿನಹಣ್ಣನ್ನು ತಿಂದರೆ ವಾತ-ಪಿತ್ತ ನಾಶಗೊಳಿಸಿ ಹೃದಯಕ್ಕೆ ಹಿತವಾಗುವುದು
· ಸೌತೆಕಾಯಿಯನ್ನು ಸಿಪ್ಪೆ ಸಹಿತ ಕತ್ತರಿಸಿ ಕಾಳುಮೆಣಸಿನ ಪುಡಿ ಮತ್ತು ಉಪ್ಪಿನೊಂದಿಗೆ ಸೇರಿಸಿಕೊಂಡು ತಿನ್ನುತ್ತಾ ಬಂದರೆ ಜೀರ್ಣಶಕ್ತಿ ಹೆಚ್ಚುವುದು.
· ಊಟದ ನಂತರ ಹಣ್ಣನ್ನು ಸೇವಿಸುತ್ತಾ ಬಂದರೆ ಆಹಾರ ಚೆನ್ನಾಗಿ ಜೀರ್ಣವಾಗುವುದು.
· ಮೆಣಸನ್ನು ಚೆನ್ನಾಗಿ ಪುಡಿ ಮಾಡಿ ಶುಂಠಿಯ ರಸದೊಡನೆ ಸೇವಿಸುವುದರಿಂದ ಅಜೀರ್ಣವು ನಿವಾರಣೆಯಾಗುತ್ತದೆ.
· ಊಟ ಮಾಡುವುದಕ್ಕೆ ಮೊದಲು ಅವರೆಕಾಳಿನಷ್ಟು ಹಸಿಶುಂಠಿಯನ್ನು ನಾಲ್ಕು ಹರಳು ಉಪ್ಪು ಸಹಿತ ಅಗಿದು ತಿಂದರೆ ಅಜೀರ್ಣದ ಸಮಸ್ಯೆ ಇಲ್ಲವಾಗುವುದು.
· ಆಮ್ಲಪಿತ್ತದಿಂದ (‘ಎಸಿಡಿಟಿ’ಯಿಂದ) ಬಳಲುವವರು ಕರಿಬೇವಿನ ಮರದ ತೊಗಟೆಯ ಒಂದು ಚಮಚೆ ಪುಡಿಯನ್ನು ನೀರಲ್ಲಿ ಬೆರೆಸಿ ಸೇವಿಸಬೇಕು
· ಕರಿಬೇವಿನ ಚಿತ್ರಾನ್ನ ಜ್ವರ ಬಂದು ಹೋದ ನಂತರ ಮತ್ತು ಅಜೀರ್ಣದಿಂದ ಬಳಲುವವರಿಗೆ ಸ್ವಾದಿಷ್ಟ ಆಹಾರವಾಗಿದೆ
· ಪಪ್ಪಾಯ ಜೀರ್ಣಕಾರಿ ಶಕ್ತಿಯನ್ನು ಪಡೆದಿದೆ, ಜೀರ್ಣಾಂಗದ ಅನೇಕ ತೊಂದರೆಗಳಿಗೆ ನಿವಾರಣೆ ನೀಡುತ್ತದೆ.

Comments are closed.