ಮಂಗಳೂರು, ಜೂನ್.05: ನಗರದಲ್ಲಿ ವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಓರ್ವನನ್ನು ನಗರ ಅಪರಾಧ ಪತ್ತೆ ದಳದ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಜಪ್ಪಿನಮೊಗರು ನಿವಾಸಿ ಕೀರ್ತಿರಾಜ್ (24) ಬಂಧಿತ ಆರೋಪಿ. ಆರೋಪಿಯಿಂದ 7.20ಲಕ್ಷ ರೂ. ನಗದು, 5 ಮೊಬೈಲ್ ಹಾಗೂ ಒಂದು ಲ್ಯಾಪ್‌ಟಾಪ್ ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿ ಲೋಟಸ್ ಮತ್ತು ಆರೆಂಜ್ ಆಯಪ್ ಬಳಸಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯು ಬೆಟ್ಟಿಂಗ್ ದಂಧೆಯಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿಯನ್ವಯ ಅಪರಾಧ ಪತ್ತೆ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಸೊತ್ತು ಸಮೇತಾ ಬಂಧಿಸಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಟ್ಟಿಂಗ್ ವಿರುದ್ಧ ಕಮಿಷನರ್ ಎಚ್ಚರಿಕೆ:
ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಆರಂಭಗೊಂಡ ಬಳಿಕ ನಗರದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿರುವ ಎರಡನೇ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ ಇದಾಗಿದೆ. ವಿಶ್ವಕಪ್ ಕ್ರಿಕೆಟ್ ಟೂರ್ನಿ ಪ್ರಾರಂಭವಾಗುತ್ತಿದ್ದಂತೆ ಮಂಗಳೂರಿನಲ್ಲಿ ಬೆಟ್ಟಿಂಗ್ ತೊಡಗಿರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ಮಂಗಳೂರು ಪೊಲೀಸ್ ಅಯುಕ್ತ ಸಂದೀಪ್ ಪಾಟೀಲ್ ಅವರು ಟ್ವಿಟ್ ಮೂಲಕ ಎಚ್ಚರಿಕೆ ನೀಡಿದ್ದರು. ಅದರಂತೆ ನಗರ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.
Comments are closed.