ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕ ಆರ್. ರೋಷನ್ ಬೇಗ್ ಅವರನ್ನು ಅಮಾನತು ಮಾಡಲಾಗಿದೆ.
ಶಿವಾಜಿನಗರ ಶಾಸಕರಾದ ಬೇಗ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಕಾರಣ ನೀಡಿ ಪಕ್ಷದಿಂದ ಅಮಾನತು ಮಾಡಲಾಗಿದೆ.
ಇತ್ತೀಚಿನ ದಿನಗಳಲ್ಲಿ ರೋಷನ್ ಬೇಗ್ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕೆಸಿ ವೇಣುಗೋಪಾಲ್ ಸೇರಿ ಹಲವರ ನಾಯಕತ್ವದ ಬಗೆಗೆ ಅಸಮಾಧಾನ ಹೊರಹಾಕಿದ್ದರು.
ಅಲ್ಲದೆ ರಾಜ್ಯಾದ್ಯಂತ ಸುದ್ದಿ ಮಾಡಿರುವ ಐಎಂಎ ವಂಚನೆ ಪ್ರಕರಣದ ಕುರಿತಂತೆಯೂ ಬೇಗ್ ಹೆಸರು ಮಾದ್ಯಮಗಳಲ್ಲಿ ಕೇಳಿ ಬಂದಿತ್ತು.
ಇದೀಗ ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ವೈ ಘೋರ್ಪಡೆ ಬೇಗ್ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಆದೇಶಿಸಿದ್ದಾರೆ.
Comments are closed.