ನವದೆಹಲಿ: ಹರಿಯಾಣ ಕಾಂಗ್ರೆಸ್ ವಕ್ತಾರ ವಿಕಾಸ್ ಚೌಧರಿ ಅವರನ್ನು ಅನಾಮಧೆಯ ವ್ಯಕ್ತಿಯೋರ್ವ ಗುಂಡಿಟ್ಟು ಕೊಂದಿದ್ದಾನೆ. ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ.
ವಿಕಾಸ್ ಫರಿದಾಬಾದ್ನಲ್ಲಿ ಜಿಮ್ ಮುಗಿಸಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಮಾರುತಿ ಸುಝಕಿ ಕಾರನಲ್ಲಿ ಬಂದ ವ್ಯಕ್ತಿಯೋರ್ವ ವಿಕಾಸ್ ಕಾರಿನ ಮೇಲೆ ಗುಂಡಿನ ಸುರಿಮಳೆ ಸುರಿದಿದ್ದು, 10 ಗುಂಡುಗಳನ್ನು ಹಾರಿಸಿದ್ದಾನೆ. ತೀವ್ರವಾಗಿ ಗಾಯಗೊಂಡ ವಿಕಾಸ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ.
#Haryana Congress State Spokesperson #VikasChaudhary murdered in broad daylight. The scary part is the way criminals are walking confidently towards Vikas's car and pumping more than 10 bullets. @mlkhattar pic.twitter.com/UGFZhrctco
— Kirandeep (@raydeep) June 27, 2019
ಈ ಘಟನೆ ಬಗ್ಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಜಂಗಲ್ ರಾಜ್ ಆಡಳಿತ ಜಾರಿಯಲ್ಲಿದೆ ಎಂದು ವ್ಯಂಗ್ಯವಾಡಿದೆ. “ರಾಜ್ಯದಲ್ಲಿ ಯಾರಿಗೂ ಕಾನೂನಿನ ಭಯವಿಲ್ಲ. ಈ ರೀತಿ ಪ್ರಕರಣಗಳು ನಡೆಯುತ್ತಲೇ ಇದೆ. ಬುಧವಾರ ಯುವತಿಯೊಬ್ಬರಿಗೆ ಕಿರುಕುಳ ನೀಡಲಾಗಿತ್ತು. ವಿಕಾಸ್ ಹತ್ಯೆ ಸಂಬಂಧ ತನಿಖೆ ನಡೆಯಬೇಕಿದೆ,” ಎಂದು ಹರಿಯಾಣ ಕಾಂಗ್ರೆಸ್ ಮುಖ್ಯಸ್ಥ ಅಶೋಕ್ ತನ್ವಾರ್ ಆಗ್ರಹಿಸಿದ್ದಾರೆ.
ಇಂಡಿಯನ್ ನ್ಯಾಷನಲ್ ಲೋಕ್ ದಳದಲ್ಲಿದ್ದ ಚೌಧರಿ ನಂತರ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು. ಕೊಲೆಗೆ ಕಾರಣವೇನು ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ.
Comments are closed.