ಬೆಂಗಳೂರು: ಕೇಂದ್ರದಲ್ಲಿ ಭಾರೀ ಬಹುಮತದಿಂದ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 2ನೇ ಅವಧಿಯ ಮೊದಲ ಬಜೆಟ್ ಮಂಡನೆಯಾಗಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಿದ್ದಾರೆ.
ಕೇಂದ್ರ ಬಜೆಟ್ನಲ್ಲಿ ಈ ಹಿಂದಿನ ಜನಪ್ರಿಯ ಯೋಜನೆಗಳನ್ನು ಮುಂದುವರಿಸಲಾಗಿದ್ದು, ಬಜೆಟ್ ಕುರಿತು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಪ್ರಮುಖವಾಗಿ ಬೆಂಗಳೂರು ಮೆಟ್ರೋ 2ನೇ ಹಂತದ ಕಾಮಗಾರಿಗೆ ಮೋದಿ ಸರ್ಕಾರ 1,012.50 ಕೋಟಿ ರೂ.ಗಳನ್ನು ನೀಡಿದ್ದು, ರಾಜ್ಯ ಬಹುಬೇಡಿಕೆಯಾದ ನೀರು ನಿರ್ವಹಣಾ ಹೂಡಿಕೆ ಕಾರ್ಯಕ್ರಮಕ್ಕಾಗಿ 217 ಕೋಟಿ ರೂ. ನೀಡಿದೆ. ಅಲ್ಲದೇ 2ನೇ ಹಂತದ ಜಲಾನಯನ ಅಭಿವೃದ್ಧಿ ಯೋಜನೆಗೆ 131.33 ಕೋಟಿ ರೂ. ಹಾಗೂ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಗೆ 300 ಕೋಟಿ. ರೂ ನೀಡಲಾಗಿದೆ.
ಉಳಿದಂತೆ ಮೈಸೂರಿನಲ್ಲಿರುವ ಅಖಿಲಭಾರತ ವಾಕ್ ಶ್ರವಣ ಸಂಸ್ಥೆಗೆ 25.73 ಕೋಟಿ ರೂ., ಬೆಂಗಳೂರಿನಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್ ಸಂಸ್ಥೆಗೆ 15 ಕೋಟಿ ರೂ., ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ (ನಿಮ್ಹಾನ್ಸ್) 270.25 ಕೋಟಿ ರೂ. ಅನುದಾನ ನೀಡಲಾಗಿದೆ.
Comments are closed.