ಬೆಂಗಳೂರು: ಕಾಂಗ್ರೆಸ್ನಲ್ಲಿ ಬ್ಯಾಕ್ ಟೂ ಬ್ಯಾಕ್ ರಾಜೀನಾಮೆ ಪರ್ವ ಶುರುವಾಗಿದ್ದು, ಶಾಸಕರನ್ನು ಉಳಿಸಿಕೊಳ್ಳಲು ಕಾಂಗ್ರೆಸ್ನ ಹಿರಿಯ ನಾಯಕರು ಸರ್ಕಸ್ ನಡೆಸಿದ್ದಾರೆ. ಸಚಿವ ಸ್ಥಾನ ಸಿಗದ ಕಾರಣ, ಮುನಿದಿರುವ ಅತೃಪ್ತರನ್ನ ಸಂತೈಸಲು ಮುಂದಾಗಿದ್ದಾರೆ.
ರಮೇಶ್ ಜಾರಕಿಹೊಳಿ ಮತ್ತು ಆನಂದ್ ಸಿಂಗ್ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಕೈ ನಾಯಕರ ಮನವೊಲಿಸುವ ಪ್ರಯತ್ನ ನಡೆದಿದ್ದು, ಆನಂದ್ ಸಿಂಗ್ ಜೊತೆ ಮಾಜಿ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದು, ಆನಂದ್ ಸಿಂಗ್ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೊಸಪೇಟೆ ಶಾಸಕ ಆನಂದ್ ಸಿಂಗ್ ಬಹುತೇಕ ರಾಜೀನಾಮೆ ವಾಪಸ್ ಪಡೆಯುವ ಸಾಧ್ಯತೆ ಹೆಚ್ಚಾಗಿದ್ದು, ಈ ರೀತಿಯೇ ರಮೇಶ್ ಜಾರಕಿಹೊಳಿ ಜೊತೆ ಚರ್ಚೆಗೂ ಸಿದ್ದರಾಮಯ್ಯ ಮುಂದಾಗಿದ್ದಾರೆ. ರಮೇಶ್ ಮನವೊಲಿಸುವ ಪ್ರಯತ್ನವೂ ನಡೀತಿದೆ.
Comments are closed.