ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ 14 ಶಾಸಕರ ಎಚ್.ವಿಶ್ವನಾಥ್ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಈ ಮಧ್ಯೆ ರಾಜೀನಾಮೆ ನೀಡಿದ ಶಾಸಕರನ್ನು ಕಾಂಗ್ರೆಸ್ ಟ್ರಬಲ್ ಶೂಟರ್ ಡಿಕೇಶಿಯಿಂದ ಕಾಪಾಡಿಕೊಳ್ಳುವ ಉದ್ದೇಶದಿಂದ ರೆಸಾರ್ಟ್ಗೆ ಶಿಫ್ಟ್ ಮಾಡಲು ಪ್ಲ್ಯಾನ್ ಮಾಡಿದೆ.
ಹೀಗಾಗಿ ರಾಜ್ಯಪಾಲ ಭೇಟಿ ಬಳಿಕ ಅತೃಪ್ತ ಶಾಸಕರನ್ನು ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಮಿನಿ ಬಸ್ನಲ್ಲಿ ಕರೆದೊಯ್ಯಲಾಗಿದೆ. ಎಚ್ಎಎಲ್ ವಿಮಾನ ನಿಲ್ದಾಣದಿಂದ ಅತೃಪ್ತರನ್ನು ಶಾಸಕರನ್ನು ಎರಡು ಖಾಸಗಿ ವಿಮಾನದಲ್ಲಿ ಗೌಪ್ಯ ರೆಸಾರ್ಟ್ಗೆ ಕರೆದೊಯ್ಯಲಾಗುತ್ತಿದೆ.
ಮೂಲಗಳ ಮಾಹಿತಿ ಪ್ರಕಾರ ಬಿಜೆಪಿ ಆಡಳಿತದಲ್ಲಿರುವ ಮಹಾರಾಷ್ಟ್ರದ ಮುಂಬೈಗೆ ಶಾಸಕರನ್ನು ಶಿಫ್ಟ್ ಮಾಡಲಾಗುತ್ತಿದ್ದು, ಬಿಜೆಪಿ ಹೈಕಮಾಂಡ್ ಮುಂದಿನ ಪ್ಲ್ಯಾನ್ ರೂಪಿಸುವವರೆಗೂ ಶಾಸಕರನ್ನು ಅಲ್ಲಿಯೇ ಕಾಯ್ದುಕೊಳ್ಳಲಾಗುತ್ತದೆ ಎನ್ನಲಾಗಿದೆ. ಒಟ್ಟಿನಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ರೆಸಾರ್ಟ್ ರಾಜಕಾರಣ ಗರಿಗೆದರಿದ್ದು, ಎಲ್ಲಿಗೆ ಹೋಗಿ ತಲುಪತ್ತೇ ಕಾದು ನೋಡಬೇಕಿದೆ.
Comments are closed.