ಬೆಂಗಳೂರು(ಜುಲೈ.06): ಕಾಂಗ್ರೆಸ್-ಜೆಡಿಎಸ್ನ 14 ಮಂದಿ ಅತೃಪ್ತ ಶಾಸಕರು ರಾಜೀನಾಮೆ ನೀಡಿದ್ದು, ಮೈತ್ರಿ ಸರ್ಕಾರದ ಬುಡ ಅಲುಗಾಡುತ್ತಿದೆ. ಸದ್ಯ ಈ ವಿಚಾರಕ್ಕೆ ಸಂಬಂಧಿಸಿಂದತೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, “ಸಚಿವ ಡಿ.ಕೆ ಶಿವಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಸರ್ಕಾರಕ್ಕೇನೂ ಆಗಲ್ಲ ನಡೀರಿ” ಎಂದು ವ್ಯಂಗ್ಯವಾಡಿದ್ದಾರೆ.
ಸಚಿವ ಡಿ.ಕೆ ಶಿವಕುಮಾರ್ ಎಂಟ್ರಿ ಕೊಟ್ಟಿದ್ದಾರೆ, ಕಾದು ನೋಡೋಣ. ಶಾಸಕರನ್ನು ಸಂಪರ್ಕ ಮಾಡುವ ಕೆಲಸ ಮಾಡುತ್ತಿದ್ದೇವೆ. ಈಗಾಗಲೇ ಶಿವಕುಮಾರ್ ನಾಲ್ಕು ಮಂದಿಯನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ. ಉಳಿದ ಶಾಸಕರು ನಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ.
ಇನ್ನು ಸ್ಪೀಕರ್ ರಮೇಶ್ ಕುಮಾರ್, ಯಾವುದೇ ರಾಜೀನಾಮೆ ಅಂಗೀಕಾರ ಮಾಡಿಲ್ಲ. ರಾಜೀನಾಮೆ ನೀಡದರೆ, ಸರ್ಕಾರ ಹೇಗೆ ಬೀಳತ್ತೆ. ನಾನೂ ಕೂಡ ಮಾಧ್ಯಮಗಳಲ್ಲಿ ಎಲ್ಲವನ್ನೂ ಗಮನಿಸುತ್ತಿದ್ದೀನಿ. ಸರ್ಕಾರಕ್ಕೇ ಏನೂ ಆಗಲ್ಲ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಕೂಡ ಬರುತ್ತಿದ್ದಾರೆ ನಡೀರಿ ಎಂದರು.
ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅಮೆರಿಕಾ ಪ್ರವಾಸಕ್ಕೆ ತೆರಳಿದಾಗಿನಿಂದಲೂ ಸಮ್ಮಿಶ್ರ ಸರ್ಕಾರದ ಅತೃಪ್ತ ಶಾಸಕರು ರಾಜೀನಾಮೆ ನೀಡುವ ವಿಚಾರ ಸಾಕಷ್ಟು ಕೇಳಿ ಬಂದಿತ್ತು. ನಾನು ಕೂಡ ರಾಜಕೀಯ ವಿದ್ಯಮಾನವನ್ನು ಗಮನಿಸುತ್ತಿದ್ದೇನೆ. ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಆತಂಕವಿಲ್ಲ ಎಂದಿದ್ದರು ಸಿದ್ದರಾಮಯ್ಯ.
ಇದೀಗ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಅತೃಪ್ತರ ಶಾಸಕರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಸಿಎಂ ಎಚ್.ಡಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿದೇಶದಿಂದ ಮರಳುವ ಮುನ್ನವೇ ಇಂತಹ ಬೆಳವಣಿಗೆಗಳು ನಡೆದಿದ್ದು, ರಾಜ್ಯ ಸರ್ಕಾರಕ್ಕೆ ಕಂಟಕ ಎದುರಾಗಿದೆ.
Comments are closed.