ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ರಸ್ತೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದೆ. ಇದರಿಂದ ಹಲವು ಗಂಟೆಗಳ ಕಾಲ ವಾಹನ ಸಂಚಾರ ಬಂದ್ ಆಗಿದ್ದು, ವಾಹನ ಸವಾರರು ಪರದಾಟ ನಡೆಸಿದರು.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಬಳಿ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದೆ. ಇದರಿಂದ ಕಳಸ-ಕೊಟ್ಟಿಗೆಹಾರ ಸಂಚಾರ ಹಲವು ಗಂಟೆಗಳ ಕಾಲ ಬಂದ್ ಆಗಿದ್ದು, ವಾಹನ ಸವಾರರು ಪರದಾಟ ನಡೆಸಿದರು. ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಮರ ತೆರವುಗೊಳಿಸಿರುವ ಕಾರ್ಯ ನಡೆಸಿದರು.
ಮೂಡಿಗೆರೆ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ ತಾಲೂಕಿನಲ್ಲಿ ಮಳೆ ಮುಂದುವರಿದಿದ್ದು, ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಇನ್ನು, ಮಳೆಯ ಅಬ್ಬರ ಮುಂದುವರಿದ ಕಾರಣ ಜನಜೀವನ ಅಸ್ತವ್ಯಸ್ತವಾಗಿದೆ.
Comments are closed.