ಮುಂಬೈ: ವಿಶ್ವಕಪ್ ಟೂರ್ನಿಯಿಂದ ಭಾರತ ಹೊರ ಬಿದ್ದ ಬೆನ್ನಲ್ಲೇ ಇದೀಗ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಏಕದಿನ, ಟಿ20 ಹಾಗೂ ಟೆಸ್ಟ್ ಸರಣಿಗೆ ವಿರಾಟ್ ಕೊಹ್ಲಿ ಮತ್ತು ಜಸ್ ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದ್ದು ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.
ವಿರಾಟ್ ಕೊಹ್ಲಿ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದು ಅವರಿಗೆ ವಿಶ್ರಾಂತಿ ನೀಡಲು ಆಯ್ಕೆ ಸಮಿತಿ ಮುಂದಾಗಿದೆ. ಇನ್ನು ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಹಾರ್ದಿಕ್ ಪಾಂಡ್ಯಗೂ ವಿಶ್ರಾಂತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಆಗಸ್ಟ್ 3ರಿಂದ ಟಿ20 ಸರಣಿ ಆರಂಭಗೊಳ್ಳಲಿದ್ದು ತದನಂತರ ಏಕದಿನ ಸರಣಿ ಹಾಗೂ ಆಗಸ್ಟ್ 22ರಿಂದ ಟೆಸ್ಟ್ ಸರಣಿ ನಡೆಯಲಿದೆ. ವಿಂಡೀಸ್ ವಿರುದ್ಧ ಮೂರು ಟಿ20, ಮೂರು ಏಕದಿನ ಸರಣಿ ಹಾಗೂ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.
Comments are closed.