ಬೆಂಗಳೂರು: ರಾಜೀನಾಮೆ ಅಂಗೀಕರಿಸಲು ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅತೃಪ್ತ ಶಾಸಕರಾದ ಡಾ.ಸುಧಾಕರ್, ಎಂಟಿಬಿ ನಾಗರಾಜ್, ರೋಷನ್ ಬೇಗ್, ಮುನಿರತ್ನ ಮತ್ತು ಆನಂದ್ ಸಿಂಗ್ ಪ್ರತ್ಯೇಕವಾಗಿ ಸುಪ್ರೀಂ ಕೋರ್ಟ್ ಸಲ್ಲಿಸಿದ್ದಾರೆ.
ರಾಜೀನಾಮೆ ಅಂಗೀಕಾರ ಮಾಡಲು ಸ್ಪೀಕರ್ ಅನಗತ್ಯ ವಿಳಂಬ ಮಾಡಿತ್ತಿದ್ದು, ರಾಜೀನಾಮೆ ವಾಪಸ್ ಪಡೆಯಲು ಒತ್ತಡ ಹೇರುತ್ತಿದ್ದಾರೆ ಎಂದು ಅತೃಪ್ತ ಶಾಸಕರು ಆರೋಪಿಸಿದ್ದಾರೆ. ಅಷ್ಟೆ ಅಲ್ಲದೆ, ಸರಕಾರದಲ್ಲಿ ಭ್ರಷ್ಟಾಚಾರ ನಡೆದಿರುವ ಕುರಿತು ದಾಖಲೆಗಳನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದಾರೆ.
ಸರಕಾರದ ದುರಾಡಳಿತದಿಂದ ಬೇಸತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವೆ. ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ಅನಗತ್ಯ ವಿಳಂಬ ಮಾಡಿದ್ದಾರೆ. ಸರಕಾರದಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಮಾತನಾಡಿದರೆ, ಅಧಿಕಾರಿಗಳ ಮೂಲಕ ಬೆದರಿಸುವ ಕೆಲಸ ಮಾಡಲಾಗಿದೆ ಎಂದವರು ಗಂಭೀರ ಆರೋಪ ಮಾಡಿದ್ದಾರೆ.
Comments are closed.