ಮಂಗಳೂರು : ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರಿಗೆ ಮಂಗಳೂರು ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಆಗಮಿಸಿದ್ದು ಪೂರ್ಣ ಕುಂಭ ಸ್ವಾಗತ ನೀಡಲಾಯಿತು.
ಪರಮ ಪೂಜ್ಯ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಗುರುವಾರ ಸಾಯಂಕಾಲ ರಥಬೀಧಿ ಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ 5:30 ಗಂಟೆಗೆ ಸರಿಯಾಗಿ ತಮ್ಮ ಕೋಟಾ ಮೊಕ್ಕಾಂನಿಂದ ಆಗಮಿಸಿದ್ದು ಶ್ರೀಗಳವರಿಗೆ ಸಕಲ ಬಿರುದು ಬಾವಳಿಗಳೊಂದಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು.
ಶ್ರೀಗಳವರ ದೇವ ಭೇಟಿ ಬಳಿಕ ಪಾದ ಪೂಜೆ ನೆರವೇರಿತು . ಮೊಕ್ತೇಸರರಾದ ಸಿ ಎಲ್ ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ ಹಾಗೂ ಸಾವಿರಾರು ಭಜಕರು ಉಪಸ್ಥಿತರಿದ್ದರು.
ಚಿತ್ರ : ಮಂಜು ನೀರೇಶ್ವಾಲ್ಯ
Comments are closed.