ಕರಾವಳಿ

ಸ್ಟೇಟ್ ಬ್ಯಾಂಕ್ ಸಮೀಪದ ಕ್ಯಾಂಟೀನ್‌ನಲ್ಲಿ ಅನಿಲ ಸಿಲಿಂಡರ್ ಸ್ಫೋಟ ; ಓರ್ವನಿಗೆ ಗಾಯ

Pinterest LinkedIn Tumblr

ಮಂಗಳೂರು, ಜುಲೈ.26: ನಗರದ ಸ್ಟೇಟ್ ಬ್ಯಾಂಕ್ ಸಮೀಪದ ರಾವ್ ಎಂಡ್ ರಾವ್ ಸರ್ಕಲ್ ಬಳಿಯ ಕ್ಯಾಂಟೀನ್ ವೊಂದರಲ್ಲಿ ಇಂದು ಬೆಳಗ್ಗೆ ಉಂಟಾದ ಅಗ್ನಿ ಅವಘಡದಲ್ಲಿ ಓರ್ವ ಗಾಯಗೊಂಡು ಅಸ್ಪತ್ರೆಗೆ ದಾಖಲಾಗಿದ್ದಾರೆ.

ಗಾಯಾಳುವನ್ನು ಹೋಟೆಲ್ ಅಡುಗೆ ಸಿಬ್ಬಂದಿ ಅಶ್ರಫ್ ಎಂದು ಹೆಸರಿಸಲಾಗಿದೆ. ನಗರದ ರಾವ್ ಎಂಡ್ ರಾವ್ ಸರ್ಕಲ್ ಬಳಿಯ ರೀಗಲ್ ಪ್ಲಾಝಾ ವಾಣಿಜ್ಯ ಕಟ್ಟಡದಲ್ಲಿ ಕಾರ್ಯಚರಿಸುತ್ತಿದ್ದ ಸಣ್ಣ ಹೋಟೆಲ್ ವೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಈ ಅವಘಡ ಸಂಭವಿಸಿದೆ.

ಇಂದು ಬೆಳಗ್ಗೆ ಹೋಟೆಲ್ ತೆರೆದು ಅಡುಗೆ ಮಾಡಲು ಸಿದ್ಧತೆ ನಡೆಸುತ್ತಿದ್ದ ವೇಳೆ ಈ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಕದ್ರಿ ಹಾಗೂ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿಯನ್ನು ನಂದಿಸಿದ್ದಾರೆ. ಮಂಗಳೂರು ದಕ್ಷಿಣ ಹಾಗೂ ಬಂದರ್ ಠಾಣಾ ಪೊಲೀಸರೂ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Comments are closed.