ಕರ್ನಾಟಕ

14 ಶಾಸಕರನ್ನು ಅನರ್ಹಗೊಳಿಸಿರುವುದು ಪ್ರಜಾಪ್ರಭುತ್ವಕ್ಕೆ ಸಂದ ನಿಜವಾದ ಗೆಲುವು; ಸಿದ್ದರಾಮಯ್ಯ

Pinterest LinkedIn Tumblr

ಬೆಂಗಳೂರು: ವಿಧಾನಸಭಾಧ್ಯಕ್ಷ ಕೆ.ಆರ್​. ರಮೇಶ್​ಕುಮಾರ್​ ಅವರು 14 ಮಂದಿ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿ ನೀಡಿರುವ ತೀರ್ಮಾನ ಅವಕಾಶವಾದಿ ರಾಜಕಾರಣಕ್ಕೆ ನೀಡಿರುವ ಕೊಡಲಿ ಏಟು. ಪ್ರಜಾಪ್ರಭುತ್ವಕ್ಕೆ ಸಂದ ನೈಜ ಗೆಲುವು ಎಂದು ಮಾಜಿ ಸಿಎಂ ಹಾಗೂ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಅತೃಪ್ತ ಶಾಸಕರನ್ನು ಪಕ್ಷ ವಿರೋಧಿ ಚಟುವಟಿಕೆಯಡಿ ಅನರ್ಹಗೊಳಿಸಿದ್ದಾರೆ. ಸ್ವಾರ್ಥ ಸಾಧನೆ, ಅಧಿಕಾರದಾಸೆಯಿಂದ ಜನಾದೇಶವನ್ನು ಧಿಕ್ಕರಿಸಿ ತಮ್ಮನ್ನು ತಾವು ಮಾಡಿಕೊಳ್ಳುವ ಹೀನ ಸಂಸ್ಕೃತಿಗೆ ಈ ತೀರ್ಪು ಇತಿಶ್ರೀ ಹಾಡಲಿದೆ ಎಂಬುದು ನನ್ನ ನಂಬಿಕೆ ಎಂದರು.

ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಪದವಿ, ಅಧಿಕಾರ ರಾಜಕಾರಣದಲ್ಲಿ ಎಂದಿಗೂ ಶಾಶ್ವತವಲ್ಲ. ಮುಂದಿನ ಪೀಳಿಗೆಯ ರಾಜಕಾರಣಕ್ಕೆ ನಾವು ಮಾದರಿಯಾಗಿ ಏನನ್ನು ಬಿಟ್ಟುಹೋಗುತ್ತೇವೆ ಎಂಬುದು ಮುಖ್ಯ ಸಭಾಧ್ಯಕ್ಷರ ಇಂದಿನ ತೀರ್ಪು ಮುಂದಿನ ಪೀಳಿಗೆಯ ರಾಜಕಾರಣಕ್ಕೆ ಶಿಸ್ತಿನ ಮಾದರಿಯನ್ನು ತಿಳಿಸಿಕೊಡುತ್ತದೆ ಎಂದು ಹೇಳಿದ್ದಾರೆ.

Comments are closed.