ವಿಜಯಪುರ: ಕೃಷ್ಣಾ ನದಿಗೆ ಆಲಮಟ್ಟಿ ಬಳಿ ನಿರ್ಮಿಸಿರುವ ಲಾಲ ಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗುತ್ತಿದೆ. ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ 2,79,332 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಆಲಮಟ್ಟಿ ಶಾಸ್ತ್ರಿ ಜಲಾಶಯದಿಂದ 3,20,535 ಕ್ಯೂಸೆಕ್ಸ್ ನೀರು ಹೊರ ಬಿಡಲಾಗುತ್ತಿದೆ.
ಮಹಾರಾಷ್ಟ್ರ ಹಾಗೂ ರಾಜ್ಯದ ಕೃಷ್ಣಾ ನದಿ ಪಾತ್ರದಲ್ಲಿ ಸುರಿಯುತ್ತಿರುವ ಮಳೆಯ ಪ್ರಮಾಣ ಹೆಚ್ಚಾಗಿದ್ದು ಕೊಯ್ನಾ ಜಲಾಶಯದಿಂದ ಇನ್ನೂ 1 ಟಿಎಂಸಿ ಅಡಿ ನೀರು ಹೊರಬಿಡುವ ಸಾಧ್ಯತೆ ಇದೆ. ಒಂದೊಮ್ಮೆ ಕೊಯ್ನಾ ಜಲಾಶಯದಿಂದ ಹೊರ ಹರಿವು ಹೆಚ್ಚಾದಲ್ಲಿ ಶಾಸ್ತ್ರಿ ಹಾಗೂ ಬಸವ ಸಾಗರ ಜಲಾಶಯದ ಹಿನ್ನೀರು ಈಗಿರುವ ಜಮೀನಿಂದ ಜನ ವಸತಿ ಪ್ರದೇಶಕ್ಕೆ ನುಗ್ಗುವ ಭೀತಿ ಎದುರಾಗಿದೆ.
ಆಗಸ್ಟ್ 6 ರಂದು ಆಲಮಟ್ಟಿ ಶಾಸ್ತ್ರಿ ಜಲಾಶಯದ ನೀರಿನ ಗರಿಷ್ಠ ಮಟ್ಟ ; 519.60 ಮೀ. ಇಂದಿನ ಮಟ್ಟ; 517.65ಮೀ ಹಾಗೂ ಒಟ್ಟು 123.081 ಟಿಎಂಸಿ ಅಡಿ ಇದ್ದು, ಸದ್ಯ 92.859 ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹ ಇದೆ.
ಜಲಾಶಯಕ್ಕೆ ಹರಿಯುವ ನೀರಿನ ಪ್ರಮಾಣ ವನ್ನು ಆಧರಿಸಿ ಜಲಾಶಯದಲ್ಲಿ ನೀರು ನಿಲ್ಲಿಸುವ ನಿರ್ಧಾರ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Comments are closed.