ಮನೋರಂಜನೆ

ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ನೆರವಿಗಾಗಿ 5 ಲಕ್ಷ ನೆರವು ನೀಡಿದ ರಿಯಲ್ ಸ್ಟಾರ್ ಉಪೇಂದ್ರ

Pinterest LinkedIn Tumblr

ಬೆಂಗಳೂರು: ರಾಜ್ಯದ ಉತ್ತರ ಕರ್ನಾಟಕದ ಬಹುತೇಕ ಪ್ರದೇಶಗಳು ಪ್ರವಾಹ ಪೀಡಿತವಾಗಿದ್ದು, ಸಾವು, ನೋವು, ಸಂಕಷ್ಟ ಎದುರಾಗಿದೆ ಈ ಸಂದರ್ಭದಲ್ಲಿ ರಕ್ಷಣಾ ಕಾರ್ಯಕ್ಕೆ ರಾಜ್ಯ ಸರ್ಕಾರದ ಜೊತೆ ಕೈ ಜೋಡಿಸುವಂತೆ ಸ್ಯಾಂಡಲ್ ವುಡ್ ನ ಪ್ರಮುಖ ನಟರು ಜನತೆಗೆ ಮನವಿ ಮಾಡಿದ್ದಾರೆ ನಟ ಉಪೇಂದ್ರ 5 ಲಕ್ಷ ರೂ ನೆರವು ನೀಡಿದ್ದಾರೆ.

ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂಪಾಯಿಗಳನ್ನು ದೇಣಿಗೆಯಾಗಿ ನೀಡುತ್ತಿದ್ದೇನೆ ತಾವುಗಳೂ ಸಹ ಪ್ರವಾಹದಲ್ಲಿ ಸಿಲುಕಿರುವ ನಮ್ಮವರಿಗೆ ನಿಮ್ಮ ಇಚ್ಛಾನುಸಾರ ನೆರವಾಗುವಂತೆ ಕೇಳಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Comments are closed.