ಬೆಂಗಳೂರು: ಮೈತ್ರಿ ಸರ್ಕಾರದ ವೇಳೆ ಮೂರು ಪಕ್ಷಗಳ ಪ್ರಮುಖ ಮುಖಂಡರು, ಮಾಧ್ಯಮ ಪ್ರತಿನಿಧಿಗಳು, ಐಪಿಎಸ್ ಅಧಿಕಾರಿಗಳು ಸೇರಿದಂತೆ 300ಕ್ಕೂ ಹೆಚ್ಚು ಜನರ ಫೋನ್ಗಳನ್ನು ಟ್ಯಾಪ್ ಮಾಡಲಾಗಿತ್ತು. ಸುಮಾರು ಆರು ತಿಂಗಳ ಕಾಲ ಸತತವಾಗಿ ಎಲ್ಲರ ಮಾತುಗಳನ್ನು ಕದ್ದಾಲಿಕೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಡಿಜಿಗೆ ಮಧ್ಯಂತರ ವರದಿ ಸಲ್ಲಿಕೆಯಾಗಿದ್ದು, ವರದಿಯಲ್ಲಿ 300 ಜನರ ಫೋನ್ಗಳು ಟ್ಯಾಪ್ ಆಗಿರುವುದನ್ನು ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ನ್ಯೂಸ್ 18 ಕನ್ನಡದಲ್ಲಿ ಈ ಬಗ್ಗೆ ವಿಶೇಷ ವರದಿ ಪ್ರಸಾರವಾದ ಬಳಿಕ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಚುಕ್ಕಾಣಿ ಹಿಡಿದಿದ್ದವರೆ ಈ ಫೋನ್ ಕದ್ದಾಲಿಕೆಯ ಹಿಂದಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿದೆ. ಸರ್ಕಾರ ವಿರುದ್ಧವಾಗಿ ಯಾರ್ಯಾರು ಪಿತೂರಿ ಮಾಡುತ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಸಿಎಂ ಕುಮಾರಸ್ವಾಮಿ ಅವರೇ ಈ ಎಲ್ಲರ ಫೋನ್ಗಳನ್ನು ಟ್ಯಾಪ್ ಮಾಡಿಸಿದ್ದಾರೆ ಎಂಬ ಆರೋಪ ಕೂಡ ಬಂದಿದೆ. ಹಿರಿಯ ಐಪಿಎಸ್ ಅಧಿಕಾರಿಯೇ ನಿಂತು ಕದ್ದಾಲಿಕೆ ಮಾಡಿಸಿದ್ರಂತೆ. ಸಿಸಿಬಿ ಇನ್ಸ್ಪೆಕ್ಟರ್ಗಳ ಮೂಲಕ ಫೋನ್ ಕದ್ದಾಲಿಕೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಲೋಕಸಭೆ ಚುನಾವಣೆ ಸಮಯದಲ್ಲಿ ಈ ಫೋನ್ ಕದ್ದಾಲಿಕೆ ನಡೆದಿದೆ ಎನ್ನಲಾಗಿದೆ. ಬಿಜೆಪಿ ಮುಖಂಡರದ್ದಷ್ಟೇ ಅಲ್ಲದೇ, ಕಾಂಗ್ರೆಸ್-ಜೆಡಿಎಸ್ನ ಹಲವು ನಾಯಕರ ಫೋನ್ಗಳನ್ನು ಕದ್ದಾಲಿಸಲಾಗಿದೆ. ಅವರಲ್ಲಿ ಮುಖ್ಯವಾಗಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರ ಕರೆಗಳನ್ನು ಕದ್ದಾಲಿಸಲಾಗಿದೆ ಎನ್ನಲಾಗಿದೆ.
ಬಿಜೆಪಿಯ ಯಾವ ನಾಯಕರ ಫೋನ್ ಕದ್ದಾಲಿಕೆ?
ಬಿ.ಎಸ್.ಯಡಿಯೂರಪ್ಪ
ಬಿಎಸ್ವೈ ಪುತ್ರ ಬಿ.ವೈ ವಿಜಯೇಂದ್ರ
ಮಾಜಿ ಡಿಸಿಎಂ ಆರ್. ಅಶೋಕ್
ಮಾಜಿ ಸಿಎಂ ಎಸ್.ಎಂ. ಕೃಷ್ಣ
ಮಾಜಿ ಸಚಿವ ಸಿ.ಪಿ ಯೋಗೇಶ್ವರ್
ಮೊಳಕಾಲ್ಮೂರು ಶಾಸಕ ಶ್ರೀರಾಮುಲು
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ
ಮಲ್ಲೇಶ್ವರಂ ಶಾಸಕ ಅಶ್ವಥ್ ನಾರಾಯಣ
ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್
ಬಿಎಸ್ವೈ ಆಪ್ತ ಸಹಾಯಕ ಸಂತೋಷ್
ದೇವದುರ್ಗ ಶಾಸಕ ಶಿವನಗೌಡ ನಾಯಕ್
ಹಾಸನ ಶಾಸಕ ಪ್ರೀತಂ ಗೌಡ
ಮಾಜಿ ಸಚಿವ ಎ.ಮಂಜು
ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ
ಹೊನ್ನಾಳಿ ಶಾಸಕ ರೇಣುಕಾಚಾರ್ಯ
ಮಾಜಿ ಪತ್ರಕರ್ತ ಎಂ.ಬಿ ಮರಮ್ಕಲ್
ಜನಾರ್ದನ ರೆಡ್ಡಿ ಆಪ್ತ ಆಲಿಖಾನ್
ಕಾಂಗ್ರೆಸ್ನ ಯಾವ ನಾಯಕರ ಫೋನ್ ಕದ್ದಾಲಿಕೆ?
ಸಮನ್ವಯ ಸಮಿತಿ ನಾಯಕ ಸಿದ್ದರಾಮಯ್ಯ
ಸಿದ್ದರಾಮಯ್ಯ ಮಾಧ್ಯಮ ಸಂಯೋಜಕ ಕೆ.ವಿ ಪ್ರಭಾಕರ್
ಸಿದ್ದರಾಮಯ್ಯ ವಿಶೇಷಾಧಿಕಾರಿ ವೆಂಕಟೇಶ್
ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ
ಹಗರಿ ಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್
ಅನರ್ಹಗೊಂಡ ಶಾಸಕರು ಮತ್ತು ಅವರ ಆಪ್ತರು
ಸಿದ್ದರಾಮಯ್ಯ ಆಪ್ತ ಶಾಸಕರು, ಸಚಿವರು
ಜೆಡಿಎಸ್ನ ಯಾವ ನಾಯಕರ ಫೋನ್ ಕದ್ದಾಲಿಕೆ?
ಸಚಿವರಾಗಿದ್ದ ಜಿ.ಟಿ ದೇವೇಗೌಡ
ನಾಗಮಂಗಲ ಶಾಸಕ ಸುರೇಶ್ ಗೌಡ
ದಾಸರಹಳ್ಳಿ ಶಾಸಕ ಮಂಜುನಾಥ್
ಶಾಸಕ ರಾಜಾ ವೆಂಕಟಪ್ಪ ನಾಯಕ
ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಹೆಚ್.ವಿಶ್ವನಾಥ್
Comments are closed.