ಕರ್ನಾಟಕ

ಸಿದ್ದರಾಮಯ್ಯ ನನ್ನ ಮೊದಲ ಶತ್ರು ಎಂದು ನಾನು ಹೇಳಿಲ್ಲ; ಕುಮಾರಸ್ವಾಮಿ

Pinterest LinkedIn Tumblr


ಬೆಂಗಳೂರು: ಈ ಹಿಂದೆ ಡಿಜಿಟಲ್ ಮಾಧ್ಯಮಕ್ಕೆ ನೀಡಿದ ಸಂದರ್ಶನವನ್ನು ಇಂದು ಕೆಲವು ವಿದ್ಯುನ್ಮಾನ ಮಾಧ್ಯಮಗಳು ತಿರುಚಿ ಸುದ್ದಿ ಮಾಡಿವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.

ಬಿಜೆಪಿಗಿಂತ ಸಿದ್ದರಾಮಯ್ಯ ನನ್ನ ಮೊದಲ ಶತ್ರು ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎಂಬ ಸುದ್ದಿ ಇಂದು ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಈ ಸುದ್ದಿ ಸಂಬಂಧ ಸ್ಪಷ್ಟನೆ ನೀಡಿರುವ ಎಚ್​ಡಿಕೆ, ಡಿಜಿಟಲ್ ಮಾಧ್ಯಮದ ಪತ್ರಕರ್ತರಿಗೆ ಕೆಲ ದಿನಗಳ ಹಿಂದೆ ನೀಡಿದ ಸಂದರ್ಶನವನ್ನು ಇಂದು ಕೆಲವು ವಿದ್ಯುನ್ಮಾನ ಮಾಧ್ಯಮಗಳು ತಿರುಚಿವೆ. ಶ್ರೀ ಸಿದ್ದರಾಮಯ್ಯ ಅವರು ಚುನಾವಣೆ ಮುನ್ನ ಬಿಜೆಪಿಗಿಂತ ನಮ್ಮ ಪಕ್ಷವನ್ನು ಹೆಚ್ಚು ಟೀಕಿಸುತ್ತಿದ್ದರು ಎಂದು ಹೇಳಿದ್ದೆ. ಆದರೆ ಸಿದ್ದರಾಮಯ್ಯ ಅವರು ನನ್ನ ಮೊದಲ ಶತ್ರು ಎಂದಿರಲಿಲ್ಲ. ಆ ಬಗ್ಗೆ ಅನಗತ್ಯ ಗೊಂದಲ ಬೇಡ ಎಂದು ಹೇಳಿದ್ದಾರೆ.

ಡಿಜಿಟಲ್ ಮಾಧ್ಯಮದ ಪತ್ರಕರ್ತರಿಗೆ ಕೆಲ ದಿನಗಳ ಹಿಂದೆ ನೀಡಿದ ಸಂದರ್ಶನವನ್ನು ಇಂದು ಕೆಲವು ವಿದ್ಯುನ್ಮಾನ ಮಾಧ್ಯಮಗಳು ತಿರುಚಿವೆ. ಶ್ರೀ ಸಿದ್ದರಾಮಯ್ಯ ಅವರು ಚುನಾವಣೆ ಮುನ್ನ ಬಿಜೆಪಿಗಿಂತ ನಮ್ಮ ಪಕ್ಷವನ್ನು ಹೆಚ್ಚು ಟೀಕಿಸುತ್ತಿದ್ದರು ಎಂದು ಹೇಳಿದ್ದೆ.ಆದರೆ ಸಿದ್ದರಾಮಯ್ಯ ಅವರು ನನ್ನ ಮೊದಲ ಶತ್ರು ಎಂದಿರಲಿಲ್ಲ.ಆ ಬಗ್ಗೆ ಅನಗತ್ಯ ಗೊಂದಲ ಬೇಡ.

“ಮೈತ್ರಿ ಸರ್ಕಾರ ಸಿದ್ದರಾಮಯ್ಯಗೆ ಇಷ್ಟ ಇರಲಿಲ್ಲ. ದೋಸ್ತಿ ಪಕ್ಷಗಳ ನಡುವೆ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಸಮನ್ವಯ ತರಲಿಲ್ಲ. ಸರ್ಕಾರ ನಡೆಸಲು ಹೆಜ್ಜೆ ಹೆಜ್ಜೆಗೂ ತೊಡಕಾಗುತ್ತಿದ್ದರು. ನನ್ನ ಮತ್ತು ನನ್ನ ತಂದೆ ಮೇಲೆ ಹಳೇ ದ್ವೇಷ ಸಾಧಿಸಿಕೊಂಡರು. ಜೆಡಿಎಸ್ ಹಾಗೂ ನಮ್ಮ ತಂದೆ ಸೋಲಿಗೆ ಕಾರಣವಾದರು. ಆಪ್ತ ಶಾಸಕರ ಮೂಲಕ ಸರ್ಕಾರಕ್ಕೆ ಕಿರುಕುಳ ನೀಡಿದರು. ದೋಸ್ತಿ ಸರ್ಕಾರ ಬೀಳಲು ಸಿದ್ದರಾಮಯ್ಯ ಅವರೇ ನೇರ ಕಾರಣ. ಕಾಂಗ್ರೆಸ್‌ಗಿಂತ ಬಿಜೆಪಿ ದೋಸ್ತಿಯೇ ನೆಮ್ಮದಿ ಕೊಟ್ಟಿತ್ತು. ನನ್ನ ಮೊದಲ ಶತ್ರು ಬಿಜೆಪಿಯಲ್ಲ ಸಿದ್ದರಾಮಯ್ಯ,” ಎಂದು ಎಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ ಎಂದು ಆಂಗ್ಲ ವೆಬ್​ಸೈಟಿನಲ್ಲಿ ಸುದ್ದಿ ಪ್ರಸಾರವಾಗಿತ್ತು. ಇದರ ಆಧಾರದ ಮೇಲೆ ಇಂದು ಕನ್ನಡದ ಹಲವು ಸುದ್ದಿ ವಾಹಿನಿಗಳು ಈ ಬಗ್ಗೆ ವರದಿ ಪ್ರಸಾದ ಮಾಡಿದ್ದವು.

ಕುಮಾರಸ್ವಾಮಿ ಹೀಗೆ ಹೇಳಿದ್ದಾರೆ ಎಂಬ ವರದಿ ಪ್ರಸಾರವಾದ ಬಳಿಕ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ “ಕುಮಾರಸ್ವಾಮಿ ನನ್ನನ್ನು ಶತ್ರುವಿನಂತೆ ನೋಡಿದ್ದೆ ಸಮಸ್ಯೆ ಆಗಿದ್ದು. ನನ್ನನ್ನು ಮಿತ್ರನಂತೆ ಅಥವಾ ಮೈತ್ರಿ ಪಕ್ಷದವರಂತೆ ನೋಡಿದಿದ್ದರೆ ಏನೂ ಆಗುತ್ತಿರಲಿಲ್ಲ,” ಎಂದು ತಿರುಗೇಟು ನೀಡಿದ್ದರು.

Comments are closed.