ರಾಯಚೂರು: ಫೇಸ್‌ಬುಕ್‌ನಲ್ಲಿ ವಾಲ್ಮೀಕಿ, ಶಿವಾಜಿ, ಸಂಗೊಳ್ಳಿ ರಾಯಣ್ಣ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಿನ್ನೆಲೆಯಲ್ಲಿ ಲಿಂಗಸುಗೂರು ಪಟ್ಟಣದಲ್ಲಿ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟ್ ಅಪ್‌ಲೋಡ್ ಆಗುತ್ತಿದ್ದಂತೆ ಯುವಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಲಿಂಗಸುಗೂರು ಪಟ್ಟಣದ ಪೊಲೀಸ್ ಠಾಣೆಯ ಮುಂದೆಯೇ ಯುವಕರು ಪ್ರತಿಭಟನೆ ನಡೆಸಿದರು.
ಘಟನೆ ಹಿನ್ನೆಲೆ ಆರೋಪಿ ಸೈಯದ್ ಚಾವೂಸ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದಂತೆ ಇನ್ನೂ 10ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಉದ್ರಿಕ್ತರು ಆರೋಪಿಯ ಸ್ನೇಹಿತನನ್ನು ಮಂಜುನಾಥನ ಮೇಲೆ ಹಲ್ಲೆ ನಡೆಸಿದರು.
ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಜನರು, ಟೈರ್‌ಗೆ ಬೆಂಕಿಯಿಟ್ಟು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಉದ್ರಿಕ್ತರು ಕಲ್ಲು ತೂರಾಟ ನಡೆಸಿದರು. ಪೊಲೀಸ್ ಜೀಪ್‌ಗೆ ಹಾನಿಯಾಗಿದೆ. ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಲಿಂಗಸುಗೂರಿನಲ್ಲಿ ಪರಿಸ್ಥಿತಿ ಈಗ ಉದ್ವಿಗ್ನಗೊಂಡಿದೆ.
ಇಂಥ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
Comments are closed.