ಮಂಗಳೂರು, ಆಗಸ್ಟ್. 26: ದುಬೈ ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) ಮತ್ತು ಬ್ಯಾರೀಸ್ ಕಲ್ಚರಲ್ ಫೋರಂ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಮತ್ತು ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ಸಹಕಾರದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸ್ವ ಉದ್ಯೋಗಕ್ಕಾಗಿ 60 ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಕಾರ್ಯಕ್ರಮ ರವಿವಾರ ನಗರದ ಪುರಭವನದಲ್ಲಿ ನಡೆಯಿತು.
ಮಾಜಿ ಸಚಿವ, ಶಾಸಕ ಯು.ಟಿ. ಖಾದರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶೈಕ್ಷಣಿಕ ಸಾಧನೆಗಳ ಮೂಲಕ ಉನ್ನತ ಸ್ಥಾನಕ್ಕೇರುವ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಬ್ಯಾರಿ ಸಮುದಾಯ ಮುನ್ನುಗ್ಗಬೇಕಿದೆ. ಕೇವಲ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದುಕೊಂಡರೆ ಸಾಲದು. ಬಲಿಷ್ಠ ಸಮಾಜ, ದೇಶ ಕಟ್ಟಲು ಶಿಕ್ಷಣ ಅಗತ್ಯವಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳು ತಾವು ಕಲಿತ ವಿದ್ಯೆ, ವಿನಯಶೀಲತೆಯನ್ನು ಸಮಾಜಕ್ಕೆ ಮಾದರಿಯಾಗುವಂತೆ ಬಳಸಿಕೊಳ್ಳಬೇಕು. ಜೀವನ ಶೈಲಿ, ವ್ಯಕ್ತಿತ್ವ ವಿಕಸನದ ಜೊತೆಗೆ ಯಶಸ್ಸು ಸಾಧಿಸಲು ಮುಂದಾಗಬೇಕು. ಕೇವಲ ಕನಸು ಕಂಡರೆ ಸಾಲದು. ಅದನ್ನು ನನಸುಗೊಳಿಸಲು ಶ್ರಮಪಡಬೇಕಿದೆ ಎಂದು ಹೇಳಿದರು.
ಬಿಸಿಎಫ್‌ನ ಅಧ್ಯಕ್ಷ ಡಾ. ಬಿ.ಕೆ.ಯೂಸುಫ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 17 ವರ್ಷಗಳಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಈ ಬಾರಿ ಪಿಯುಸಿಯಿಂದ ಸ್ನಾತಕೋತ್ತರ ಪದವಿಯವರೆಗಿನ 480 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸುವ ಗುರಿ ಹಾಕಿದ್ದೇವೆ ಎಂದು ಅವರು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಿಸಿಪಿ ಅರುಣಾಂಶು ಗಿರಿ, ಮನಪಾ ಆಯುಕ್ತ ಮುಹಮ್ಮದ್ ನಝೀರ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಮೊಯ್ದಿನ್ ಬಾವಾ, ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಯಂಡ್ ಇಂಡಸ್ಟ್ರಿಯ ಅಧ್ಯಕ್ಷ ಹಾಜಿ ಎಸ್.ಎಂ. ರಶೀದ್, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ಸ್ಥಾಪಕಾಧ್ಯಕ್ಷ ಅಬ್ದುಲ್ ರವೂಫ್ ಪುತ್ತಿಗೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯ ಡಾ. ಯು.ಟಿ. ಇಫ್ತಿಕಾರ್ ಅಲಿ, ಸುಲ್ತಾನ್ ಗೋಲ್ಡ್ ಆಯಂಡ್ ಡೈಮಂಡ್‌ನ ಆಡಳಿತ ನಿರ್ದೇಶಕ ಅಬ್ದುಲ್ ರವೂಫ್, ಕೆಸಿಸಿಐ ಅಧ್ಯಕ್ಷ ಪಿ.ಬಿ. ಅಬ್ದುಲ್ ಹಮೀದ್, ಉದ್ಯಮಿಗಳಾದ ಹಾಜಿ ಕೆ.ಎಸ್. ಸೈಯದ್ ಕರ್ನಿರೆ, ಮುಹಮ್ಮದ್ ಹಾರಿಸ್ ಮುಕ್ಕ, ಎಸ್.ಎ. ಶರೀಫ್ (ಪಿ.ಸಿ.ಬಾವಾ), ಎಸ್.ಎಂ. ಮುಸ್ತಫಾ ಭಾರತ್, ಹಿದಾಯ ಫೌಂಡೇಶನ್‌ನ ಸ್ಥಾಪಕಾಧ್ಯಕ್ಷ ಖಾಸಿಂ ಅಹ್ಮದ್, ಕರ್ನಾಟಕ ಮುಸ್ಲಿಂ ಜಮಾಅತ್‌ನ ದ.ಕ.ಜಿಲ್ಲಾ ಉಪಾಧ್ಯಕ್ಷ ಹೈದರ್ ಪರ್ತಿಪ್ಪಾಡಿ, ಬ್ಯಾರಿ ಅಕಾಡಮಿಯ ಮಾಜಿ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್, ಮಾಜಿ ಸದಸ್ಯರಾದ ಖಾಲಿದ್ ಉಜಿರೆ, ಬಶೀರ್ ಬೈಕಂಪಾಡಿ, ಅಝೀಝ್ ಬೈಕಂಪಾಡಿ, ಹುಸೈನ್ ಕಾಟಿಪಳ್ಳ, ಪ್ರಾಂಶುಪಾಲೆ ಝಾಹಿದಾ ಜಲೀಲ್ ಮತ್ತಿತರರು ಭಾಗವಹಿಸಿದ್ದರು.
ಬಿಸಿಎಫ್‌ನ ಕಾರ್ಯಚಟುವಟಿಕೆ ಮತ್ತು ಮುಂದಿನ ಯೋಜನೆಗಳ ಬಗ್ಗೆ ಬಿಸಿಎಫ್ ಸ್ಕಾಲರ್‌ಶಿಪ್ ಕಮಿಟಿಯ ಅಧ್ಯಕ್ಷ ಎಂ.ಇ. ಮೂಳೂರು ವಿವರಿಸಿದರು.
ಬಿಸಿಎಫ್ ಪೋಷಕ ಬಿ.ಎಂ. ಮುಮ್ತಾಝ್ ಅಲಿ ಸ್ವಾಗತಿಸಿದರು. ಪಂಪ್‌ವೆಲ್ ತಖ್ವಾ ಇಸ್ಲಾಮಿಕ್ ಸ್ಕೂಲ್‌ನ ಪ್ರೊಫೆಸರ್ ಹಾಫಿಳ್ ಸಲ್ಮಾನ್ ಕಿರಾಅತ್ ಪಠಿಸಿದರು. ಬಿಸಿಎಫ್ ಉಪಾಧ್ಯಕ್ಷ ಅಮೀರುದ್ದೀನ್ ಎಸ್.ಐ. ವಂದಿಸಿದರು. ಬಿಸಿಎಫ್ ಪ್ರಧಾನ ಕಾರ್ಯದರ್ಶಿ ಡಾ. ಕಾಪು ಮುಹಮ್ಮದ್ ಮತ್ತು ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ಸಲಹೆಗಾರ ರಫೀಕ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.
ಯುಎಇ ಲಂಡನ್ ಅಮೆರಿಕನ್ ಸಿಟಿ ಕಾಲೇಜಿನ ನಿರ್ದೇಶಕ ಪ್ರೊ. ಡಾ.ಕಾಪು ಮುಹಮ್ಮದ್ ಕೆರಿಯರ್ ಗೈಡೆನ್ಸ್ ಸಿಂಪೋಸಿಯಂ ಕಾರ್ಯಕ್ರಮ ನಡೆಸಿಕೊಟ್ಟರು. ಈ ಸಂದರ್ಭ ಖಾಝಿ ಇಬ್ರಾಹೀಂ ಮುಸ್ಲಿಯಾರ್ ಬೇಕಲ್ ದುಆಗೈದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಜಿ.ಎ.ಬಾವಾ, ಅಬುಧಾಬಿ ಬ್ಯಾರೀಸ್ ವೆಲ್ಫೇರ್ ಫೋರಂನ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್, ಉದ್ಯಮಿ ಅಶ್ರಫ್ ಕರ್ನಿರೆ, ಅಬ್ದುಲ್ಲಾ ಮದುಮೂಲೆ ಹಾಗೂ ವಿವಿಧ ಕ್ಷೇತ್ರದ ಸಾಧಕರಾದ ಡಾ. ಮರಿಯಂ ಅಂಜುಮ್ ಇಫ್ತಿಕಾರ್, ಡಾ. ನಜೀಬ್ ಬೆಹ್‌ಝಾದ್ ಮುಹಮ್ಮದ್, ಡಾ. ಸಲ್ಮಾ ಸುಹಾನಾ, ಸ್ನೇಹ ದೀಪಾದ ತಬಸ್ಸುಂ ಅವರನ್ನು ಸನ್ಮಾನಿಸಲಾಯಿತು.
ರೆಂಜಾಳದ ಬದ್ರಿಯಾ ಮದ್ರಸದ 5ನೆ ತರಗತಿ ವಿದ್ಯಾರ್ಥಿನಿ ಫಾತಿಮತ್ ನಿಶ್ಮಾ, ಪರಪ್ಪು ಹಿದಾಯತುಸ್ಸಿಬಿಯಾನ್ ಮದ್ರಸದ 7ನೆ ತರಗತಿ ವಿದ್ಯಾರ್ಥಿನಿ ಫಾತಿಮತ್ ಶಾಝಾ, ಮಾಡನ್ನೂರಿನ ನೂರುಲ್ ಇಸ್ಲಾಮ್ ಮದ್ರಸದ 10ನೆ ತರಗತಿಯ ವಿದ್ಯಾರ್ಥಿನಿ ರಝ್ನಾ ಎಂಎ, ಕಲ್ಕಡ್ಕ ಕೆ.ಸಿ.ರೋಡ್‌ನ ನೂರುಲ್ ಉಲೂಂ ಮದ್ರಸದ 12ನೆ ತರಗತಿಯ ವಿದ್ಯಾರ್ಥಿನಿ ಅಸ್‌ಮೀನಾ ಅವರಿಗೆ ಬಿಸಿಎಫ್ ಮದ್ರಸ ಎಕ್ಸಲೆನ್ಸ್ ಅವಾರ್ಡ್ ನೀಡಲಾಯಿತು.
ಉಪ್ಪಿನಂಗಡಿಯ ಇಂದ್ರಪ್ರಸ್ತ ವಿದ್ಯಾಲಯದ ಎಸೆಸ್ಸೆಲ್ಸಿ ವಿದ್ಯಾರ್ಥಿನಿ ತಾಜ್ ಅಮೀಶಾ, ಹೆಬ್ರಿಯ ಎಸ್‌ಆರ್ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ರಈಸಾ, ಬಬ್ಬುಕಟ್ಟೆ ಹಿರಾ ಕಾಲೇಜಿನ ವಾಣಿಜ್ಯ ವಿಭಾಗದ ಉಝ್ರೆ ಖೈರುನ್ನಿಸಾ ಮತ್ತು ಕಲಾ ವಿಭಾಗದ ಖದೀಜಾ ಅನ್‌ಸಾ ಅವರಿಗೆ ಬಿಸಿಎಫ್ ಅಕಾಡಮಿಕ್ ಎಕ್ಸಲೆನ್ಸ್ ಅವಾರ್ಡ್ ನೀಡಲಾಯಿತು.
ಉಪ್ಪಿನಂಗಡಿಯ ಇಂದ್ರಪ್ರಸ್ಥ ಪಿಯು ಕಾಲೇಜಿನ ಅಮಾನ್ ಕೆ.ಎ. ಮತ್ತು ಎ.ಯು. ನಚಿಕೇತ್ ಕುಮಾರ್‌ಗೆ ಬಿಸಿಎಫ್ ಯುವ ವಿಜ್ಞಾನಿ ಅವಾರ್ಡ್ ನೀಡಿ ಗೌರವಿಸಲಾಯಿತು. ಮಂಗಳೂರು ಬಂದರ್‌ನ ಕ್ರೆಸೆಂಟ್ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ವರದಿ ಕೃಪೆ : ವಾಭಾ
Comments are closed.