ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರಾಧಿಕಾರ(ಕಾಡಾ)ದ ಎದುರು ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರನ್ನು ಜನಪ್ರತಿನಿಧಿಗಳ ಕೋರ್ಟ್ ಸೋಮವಾರ ಖುಲಾಸೆಗೊಳಿಸಿ ತೀರ್ಪು ನೀಡಿದೆ.
ಭದ್ರಾ ಜಲಾಶಯದಿಂದ ಶಿವಮೊಗ್ಗದ ಕೆರೆಗಳಿಗೆ ನೀರು ಹರಿಸಬೇಕೆಂದು ಒತ್ತಾಯಿಸಿ ಕಾಡಾ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಅಧಿಕಾರಿಗಳ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಚೇರಿಯ ಪೀಠೋಪಕರಣ ಧ್ವಂಸಗೊಳಿಸಿದ ಆರೋಪ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ್ ಅವರು ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಅವರನ್ನು ದೋಷಮುಕ್ತಗೊಳಿಸಲಾಗಿದೆ ಎಂದು ತೀರ್ಪು ನೀಡಿದರು.
Comments are closed.