ಮಂಗಳೂರು, ಸೆಪ್ಟಂಬರ್,07: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ಅವರು ಶನಿವಾರ ಮಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು.
ಅಪರ ಜಿಲ್ಲಾಧಿಕಾರಿ ರೂಪಾ ನೂತನ ಜಿಲ್ಲಾಧಿಕಾರಿಗಳನ್ನು ಸ್ವಾಗತಿಸಿದರು. ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯ್ಕ್, ತಹಶೀಲ್ದಾರ್ ಗುರುಪ್ರಸಾದ್ ಉಪಸ್ಥಿತರಿದ್ದರು.
2011ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಅವರು ಉಡುಪಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ಅವರನ್ನು ದ.ಕ. ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೈಸೂರಿನ ಎನ್‌ಐಇಯಿಂದ ಬಿ.ಇ. (ಇ ಆಯಂಡ್ ಸಿ) ಪದವೀಧರೆ ಸಿಂಧು ಬಿ.ರೂಪೇಶ್ 2011ನೇ ಸಾಲಿನ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದರು.
ಸಿಂಧು ಅವರು ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ಮಹಿಳಾ ಜಿಲ್ಲಾಧಿಕಾರಿ. ಈ ಹಿಂದೆ, 1989 ರಲ್ಲಿ ರಂಜನಿ ಶ್ರೀಕುಮಾರ್ ಅವರು ಅವಿಭಜಿತ ದ.ಕ. ಜಿಲ್ಲೆಯ ಪ್ರಥಮ ಮಹಿಳಾ ಜಿಲ್ಲಾಧಿಕಾರಿಯಾಗಿದ್ದರು.
ಸಿಂದು ಬಿ. ರೂಪೇಶ್ ಅವರು ದ.ಕ. ಜಿಲ್ಲೆಯ 129 ನೇ ಜಿಲ್ಲಾಧಿಕಾರಿ. ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳೆರಡೂ ಹುದ್ದೆಗಳಲ್ಲಿ ಮಹಿಳೆಯರಿರುವುದು ವಿಶೇಷ.
Comments are closed.