ಕರ್ನಾಟಕ

ಯಲಹಂಕ ವಾಯ್ಸ್’ ಕನ್ನಡ ಮಾಸ ಪತ್ರಿಕೆ ಸಂಪಾದಕ ಅನಿಲ್ ರಾಜ್ ಆತ್ಮಹತ್ಯೆ

Pinterest LinkedIn Tumblr

ಬೆಂಗಳೂರು : ಬೆಂಗಳೂರಿನ ‘ಯಲಹಂಕ ವಾಯ್ಸ್’ ಕನ್ನಡ ಮಾಸ ಪತ್ರಿಕೆ ಸಂಪಾದಕ ಅನಿಲ್ ರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಚಾರಣಾಧೀನ ಕೈದಿಯಾಗಿ ಅನಿಲ್ ಜೈಲಿನಲ್ಲಿದ್ದರು.

ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅನಿಲ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಗಳವಾರ ಕುಟುಂಬ ಸದಸ್ಯರು ಅವರನ್ನು ಭೇಟಿಯಾಗಿದ್ದರು. ರಾತ್ರಿ ವೇಳೆಗೆ ಅನಿಲ್ ಸಾವನ್ನಪ್ಪಿದ್ದಾರೆ ಎಂದು ಕುಟುಂಬದರಿಗೆ ಮಾಹಿತಿ ನೀಡಲಾಗಿದೆ.

ಮದುವೆ ಆಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ನಡೆಸಿದ ಆರೋಪ ಅನಿಲ್ ರಾಜ್ ಮೇಲೆ ಇತ್ತು. ಯಲಹಂಕ ಉಪ ನಗರ ಪೊಲೀಸರು ಅವರನ್ನು ಬಂಧಿಸಿದ್ದರು. ವಿಚಾರಣಾಧೀನ ಕೈದಿಯಾಗಿ ಅನಿಲ್ ಜೈಲಿನಲ್ಲಿದ್ದರು.

ಜೈಲಿನ ಆವರಣದಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು ಎಂಬ ಮಾಹಿತಿ ಸಿಕ್ಕಿದೆ. ಅನಿಲ್‌ರನ್ನು ಕೆಳಗಿಳಿಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ, ಮಾರ್ಗ ಮಧ್ಯಯೇ ಅವರು ಮೃತಪಟ್ಟಿದ್ದರು.

Comments are closed.