ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ ಸಂಜೆ ಉಗ್ರರು ನಡೆಸಿದ ದಾಳಿಗೆ ಪಂಜಾಬ್ ಮೂಲದ ಸೇಬಿನ ವ್ಯಾಪಾರಿಯೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚರಣ್ಜಿತ್ ಸಿಂಗ್ ಮತ್ತು ಸಂಜೀವ್ ಎಂಬುವವರ ಮೇಲೆ ಮೂರರಿಂದ ನಾಲ್ವರು ಉಗ್ರರು ಸಂಜೆ 7.30ರ ಸಮಯದಲ್ಲಿ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ತಕ್ಷಣದಲ್ಲೇ ಪುಲ್ವಾಮಾ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚರಣ್ಜಿತ್ ಸಿಂಗ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಸಂಜೀವ್ ಅವರ ಸ್ಥಿತಿಯೂ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಣಿವೆಯಲ್ಲಿ ಕೆಲವು ದಿನಗಳಿಂದ ಇಂತಹ ಘಟನೆಗಳು ನಡೆಯುತ್ತಿವೆ. ಇದಕ್ಕೂ ಮುನ್ನ ದಿನ ಪಕ್ಕದ ಅನಂತನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಯ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್ ಇ ತೋಯ್ಬಾ ಸಂಘಟನೆಯ ಮೂವರು ಉಗ್ರರನ್ನು ಹೊಡೆದುರುಳಿಸಿದ್ದರು.
Comments are closed.