ಹೊಸದಿಲ್ಲಿ: ಐಎನ್ ಎಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮಾಜಿ ಸಚಿವ ಪಿ ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಲಾಗಿದೆ.
ಸಿಬಿಐ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂಗೆ ಜಾಮೀನು ಸಿಕ್ಕಿದ್ದರೂ ಅವರು ಜಾರಿ ನಿರ್ದೇಶನಾಲಯದ ವಶದಲ್ಲಿರುವ ಕಾರಣ ಅವರು ತಿಹಾರ್ ಜೈಲಿನಲ್ಲೇ ಮುಂದುವರಿಯಬೇಕಾಗಿದೆ.
ಸಿಬಿಐ ತಮ್ಮ ಮೇಲೆ ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ನೀಡುವಂತೆ ಅವರು ಸುಪ್ರೀಂ ಮೆಟ್ಟಿಲೇರಿದ್ದರು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಇನ್ನೂ ಇಡಿ ವಶದಲ್ಲಿದ್ದು, ಅವರ ಬಂಧನದ ಅವಧಿ ಅಕ್ಟೋಬರ್ 24ರವರೆಗೆ ಮುಂದುವರಿಯಲಿದೆ.
Comments are closed.