ಕರಾವಳಿ

ನೂತನ ಶಿಕ್ಷಣ ನೀತಿಯಿಂದ ಪ್ರಾಥಮಿಕ ಶಿಕ್ಷಣ ಕನ್ನಡದಲ್ಲಿ ಅನುಷ್ಠಾನಕ್ಕೆ ಅವಕಾಶ : ಸಚಿವ ಕೋಟ ಶ್ರೀನಿವಾಸ ಪೂಜಾರಿ

Pinterest LinkedIn Tumblr

ಮಂಗಳೂರು, ನವೆಂಬರ್.01 ದ.ಕ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ಸುಕ್ರವಾರ ನವೆಂಬರ್ 1 ರಂದು ಬೆಳಗ್ಗೆ ನಗರದ ಕೇಂದ್ರ ಮೈದಾನದಲ್ಲಿ ಜರಗಿತು.ಮುಜರಾಯಿ, ಮೀನುಗಾರಿಕೆ ಹಾಗೂ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಧ್ವಜಾರೋಹಣಗೈದು ಕನ್ನಡ ರಾಜ್ಯೋತ್ಸವದ ಸಂದೇಶವನ್ನು ನೀಡಿದರು.

ಪ್ರಸ್ತಾವಿತ ನೂತನ ಶಿಕ್ಷಣ ನೀತಿಯಿಂದ ರಾಜ್ಯದ ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಕನ್ನಡದಲ್ಲಿ ಅನುಷ್ಠಾನ ಮಾಡಲು ಅವಕಾಶವುಂಟಾಗಿದೆ.ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕನ್ನಡದ ಅಭಿವೃದ್ಧಿಗೆ ಆಶಾದಾಯಕ ಎಂದು ಸಚಿವರ ತಮ್ಮ ಸಂದೇಶದಲ್ಲಿ ಹೇಳಿದರು.

ಮನಾಪ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಂದಿನ ವರ್ಷ ನೀಡುವುದಾಗಿ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ಡಾ.ಭರತ್ ಶೆಟ್ಟಿ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್, ತುಳು ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ದ.ಕ. ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಹರ್ಷ, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಅಪರ ಜಿಲ್ಲಾಧಿಕಾರಿ ರೂಪಾ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲ್ವಮಣಿ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ರಾಜ್ಯೋತ್ಸವ ಪ್ರಯುಕ್ತ ವೈಭವಪೂರ್ಣ ಮೆರವಣಿಗೆ:

ಕಾರ್ಯಕ್ರಮಕ್ಕೂ ಮುನ್ನ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಗರದ ಅಂಬೇಡ್ಕರ್ ವೃತ್ತದಿಂದ ಕನ್ನಡ ರಾಜ್ಯೋತ್ಸವದ ವೈಭವಪೂರ್ಣವಾದ ಮೆರವಣಿಗೆ ನಗರದ ಮುಖ್ಯರಸ್ತೆಯಲ್ಲಿ ಸಾಗಿಬಂದು ಕೇಂದ್ರ ಮೈದಾನತಲುಪಿತು.

ಹಿರಿಯ ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ಹಿಲ್ಡಾ ರಾಯಪ್ಪನ್, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ದ.ಕ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್‌ನ‌ ಅಧ್ಯಕ್ಷ‌ಎಸ್. ಪ್ರದೀಪ ಕುಮಾರ ಕಲ್ಕೂರ‌, ಮಂಗಳೂರು ಉಪವಿಭಾಗದ ಅಸಿಸ್ಟೆಂಟ್ ಕಮಿಷನರ್‌ ರವಿಚಂದ್ರ ನಾಯಕ್, ಮೂಡಾದ‌ ಆಯುಕ್ತ ಶ್ರೀಕಾಂತ್ ರಾವ್, ತಹಶೀಲ್ದಾರ್ ಗುರುಪ್ರಸಾದ್, ವಾರ್ತಾಧಿಕಾರಿ ಖಾದರ್ ಷಾ, ಸಾರ್ವಜನಿಕ ಶಿಕ್ಷಣ ಇಲಾಖೆಯ‌ ಉಪನಿರ್ದೇಶಕ ವಾಲ್ಟರ್ ಡಿ’ಮೆಲ್ಲೊ, ಕನ್ನಡ ಮತ್ತು ಸಂಸ್ಕೃತಿ‌ಇಲಾಖೆಯ ಸಹಾಯಕ ನಿರ್ದೇಶಕರಾಜೇಶ್ ಜಿ. ಸಹಿತ ಅನೇಕ ಪ್ರಮುಖರು ಉಪಸ್ಥಿತರಿದ್ದರು.

ವಿವಿಧ‌ಅಕಾಡೆಮಿಯ ಮುಖ್ಯಸ್ಥರು, ಜನಪದ ನೃತ್ಯ ತಂಡಗಳು, ಟ್ಯಾಬ್ಲೋಗಳು, ಶಾಲಾಮಕ್ಕಳು ಹಾಗೂ ಸಾರ್ವಜನಿಕರು ಬಹುಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ನೆಹರೂ ಮೈದಾನದವರೆಗೆ ಹಮ್ಮಿಕೊಂಡ ಮೆರವಣಿಗೆಯಲ್ಲಿ ಕರಾವಳಿಯ ಹುಲಿವೇಷ, ಕರಂಗೋಲು, ಡೋಲು ನೃತ್ಯ ಸೇರಿದಂತೆ ಅರಣ್ಯ, ಆರೋಗ್ಯ ಇಲಾಖೆ, ತೋಟಗಾರಿಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸ್ತಬ್ಧ ಚಿತ್ರಗಳ ತಂಡ ಪಾಲ್ಗೊಂಡು ಮೆರುಗು ನೀಡಿದವು.

Comments are closed.