ಉಡುಪಿ: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಬ್ರಹ್ಮಾವರ ತಾಲೂಕಿನ ಬಾರ್ಕೂರು ತಾ.ಪಂ ಕ್ಷೇತ್ರ , ಕಟಪಾಡಿ ಗ್ರಾ.ಪಂ. ವ್ಯಾಪ್ತಿಯ ಯೇಣಗುಡ್ಡೆ, ಬಿಲ್ಲಾಡಿ ಗ್ರಾ.ಪಂ. ವ್ಯಾಪ್ತಿಯ ಬಿಲ್ಲಾಡಿ, ಮುಂಡ್ಕೂರು ಗ್ರಾ.ಪಂ. ವ್ಯಾಪ್ತಿಯ ಮುಲ್ಲಡ್ಕ, ಕಲ್ಯಾ ಗ್ರಾ.ಪಂ. ವ್ಯಾಪ್ತಿಯ ಕಲ್ಯಾ , ಸದಸ್ಯ ಸ್ಥಾನಗಳಿಗೆ ನವೆಂಬರ್ 12 ರಂದು ಉಪಚುನಾವಣೆ ನಡೆಯಲಿದ್ದು, ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ ) ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ, ಸದ್ರಿ ದಿನದಂದು ಸಾರ್ವತ್ರಿಕ ರಜೆಯನ್ನು ಸರಕಾರ ಘೋಷಿಸಿದೆ.
ಈ ಚುನಾವಣಾ ಕ್ಷೆತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ಸಾರ್ವಜನಿಕ ಉದ್ದಿಮೆಗಳು, ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪೆನಿಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನಸಹಿತ ರಜೆ ನೀಡುವಂತೆ ತಿಳಿಸಲಾಗಿದೆ.
ಸಂತೆ, ಜಾತ್ರೆ ನಿಷೇಧ…
ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳಿಗೆ ನವೆಂಬರ್ ೧೨ ರಂದು ಉಪಚುನಾವಣೆ ನಡೆಯಲಿದ್ದು, ಮತದಾನದ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮತ್ತು ಸಾರ್ವಜನಿಕರು ಮತ ಹಾಕಲು ಅನುಕೂಲವಾಗುವಂತೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮ ಪಂಚಾಯತ್, ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ಮತ್ತು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರು ತಾಲೂಕು ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.
Comments are closed.