ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಶ್ರೀನಗರ್-ಬಾರಾಮುಲ್ಲಾ ನಡುವೆ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.ಇದೀಗ ಮಂಗಳವಾರದಿಂದ ರೈಲು ಸಂಚಾರ ಪುನರಾರಂಭಗೊಳಿಸಿದೆ. ಇಂದು ನಡೆದ ಪ್ರಾಯೋಗಿಕ ಸಂಚಾರದ ವೇಳೆ ರೈಲ್ವೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿಗಳು ಕೂಡಾ ಉಪಸ್ಥಿತರಿದ್ದರು.
ಶ್ರೀನಗರ್ ಮತ್ತು ಬಾರಾಮುಲ್ಲಾ ನಡುವೆ ಮಂಗಳವಾರದಿಂದ ರೈಲು ಸಂಚಾರ ಪುನರಾರಂಭಗೊಳ್ಳಲಿದ್ದು, ಸೋಮವಾರ ಭಾರತೀಯ ರೈಲ್ವೆ ಇಲಾಖೆ ಈ ಮಾರ್ಗದ ನಡುವೆ ಪ್ರಾಯೋಗಿಕ ರೈಲು ಸಂಚಾರ ನಡೆಸಿದೆ ಎಂದು ವರದಿ ತಿಳಿಸಿದೆ.
ಸುಮಾರು ಮೂರು ತಿಂಗಳಿಗಿಂತಲೂ ಹೆಚ್ಚು ಸಮಯ ಈ ಮಾರ್ಗದಲ್ಲಿ ರೈಲ್ವೆ ಸಂಚಾರ ರದ್ದು ಮಾಡಲಾಗಿದ್ದು, ಇದೀಗ ಭಾರತೀಯ ರೈಲ್ವೆ ಇಲಾಖೆ ಮತ್ತೆ ರೈಲು ಸಂಚಾರ ಪುನರಾರಂಭಿಸುವ ಮೂಲಕ ಜನಸಾಮಾನ್ಯರು ನಿಟ್ಟುಸಿರು ಬಿಡುವಂತಾಗಿದೆ ಎಂದು ವರದಿ ವಿವರಿಸಿದೆ.
ಶ್ರೀನಗರ್-ಬಾರಾಮುಲ್ಲಾ ನಡುವಿನ ರೈಲು ಸಂಚಾರ ಸ್ಥಗಿತಗೊಳಿಸಿದ್ದರಿಂದ ರೈಲ್ವೆ ಇಲಾಖೆಗೆ ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು. ಆದರೆ ಭದ್ರತಾ ದೃಷ್ಟಿಯಿಂದ ಎಲ್ಲಾ ರೈಲು ಸಂಚಾರವನ್ನು ರದ್ದುಗೊಳಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Comments are closed.