ನವದೆಹಲಿ: ಖ್ಯಾತ ಹಿನ್ನಲೆ ಗಾಯಕಿ ಲತಾ ಮಂಗೇಶ್ಕರ್ ಉಸಿರಾಟದ ಸಮಸ್ಯೆಯಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋಮವಾರ ಬೆಳಗಿನ ಜಾವ 2 ಗಂಟೆಗೆ ಅವರನ್ನು ಆಸ್ಪತ್ರೆಗೆ ಕರೆತರಲಾಯಿತು. ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಇರಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಲತಾ ಮಂಗೇಶ್ಕರ್ ಅವರ ಆರೋಗ್ಯ ಸದ್ಯ ಸ್ಥಿರವಾಗಿದೆ. ಮಂಗಳವಾರ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇರುವುದಾಗಿ ಲತಾ ಮಂಗೇಶ್ಕರ್ ಅವರ ತಂಗಿ ಉಷಾ ಮಂಗೇಶ್ಕರ್ ಹೇಳಿದ್ದಾರೆ.
ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಲತಾ ಮಂಗೇಶ್ಕರ್, ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿ ಹಲವು ಪ್ರತಿಷ್ಠಿ ಪ್ರಶಸ್ತಿಗಳಿಂದ ಗೌರವಿಸಲ್ಪಟ್ಟಿದ್ದಾರೆ.
Comments are closed.