ಚಿಕ್ಕಮಗಳೂರು: ಉಪ ಚುನಾವಣೆಯ ಮೊದಲು ಅಥವಾ ನಂತರ ಮತಷ್ಟು ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂದು ಸಚಿವ ಸಿ ಟಿ ರವಿ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಚಿವ ಸಿ.ಟಿ. ರವಿ, ಈಗಾಗಲೇ ಕೈ ಶಾಸಕರು ಬಿಜೆಪಿ ಯೊಂದಿಗೆ ಬರುವ ಅಶಯ ಹೊರಹಾಕಿದ್ದಾರೆ. ಈ ಮೂಲಕ ಕಾಂಗ್ರೆಸ್ ವಿಭಜನೆಯಾಗಲಿದೆ ಎಂದು ಮತ್ತೊಂದು ರಾಜಕೀಯ ಬೆಳವಣಿಗೆ ನಡೆಯುವಬಗ್ಗೆ ಸುಳಿವು ನೀಡಿದ್ದಾರೆ.
ಯಾವುದನ್ನೂ ಕದ್ದು ಮುಚ್ಚಿ ಮಾಡಲು ಸಾಧ್ಯವಿಲ್ಲ. ಎಷ್ಟು ಮಂದಿ ಪಕ್ಷಕ್ಕೆ ಬರಲಿದ್ದಾರೆ ಎಂದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ವೈಚಾರಿಕ ಹಿನ್ನೆಲೆಯಲ್ಲಿ ಬರುತ್ತಿದ್ದು ವ್ಯವಹಾರಿಕ ದೃಷ್ಟಿಯಿಂದಲ್ಲ ಎಂದು ಸಮಜಾಯಿಶಿ ನೀಡಿದರು.
Comments are closed.