ಬೆಂಗಳೂರು : ಡಿಸೆಂಬರ್ 5 ರಂದು ನಡೆಯಲಿರುವ ಉಪಚುನಾವಣೆಗೆ ಬಿಜೆಪಿ 13 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅನರ್ಹ ಶಾಸಕರು ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದು, ಈ ಬೆನ್ನಲ್ಲೇ ಬಿಜೆಪಿಯಿಂದ 13 ಅನರ್ಹ ಶಾಸಕರಿಗೆ ಟಿಕೆಟ್ ಘೋಷಿಸಲಾಗಿದೆ. ಇನ್ನು ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಿಜೆಪಿ ಹೈಕಮಾಂಡ್ ಇನ್ನು ಘೋಷಿಸಿಲ್ಲ. ಇನ್ನೂ ಅಥಣಿ ವಿಧಾನಸಭೆಗೆ ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡಿರುವುದರಿಂದ ಉಪಚುನಾವಣೆಯಲ್ಲಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಡಿಸಿಎಂ ಲಕ್ಷಣ್ ಸವದಿಗೆ ದೊಡ್ಡ ಆಘಾತವಾಗಿದೆ.
13 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ :
ಅಥಣಿ ವಿಧಾನಸಭಾ ಕ್ಷೇತ್ರ- ಮಹೇಶ್ ಕುಮಟಳ್ಳಿ
ಕಾಗವಾಡ ವಿಧಾನಸಭಾ ಕ್ಷೇತ್ರ- ಶ್ರೀಮಂತ ಪಾಟೀಲ್
ಗೋಕಾಕ್ ವಿಧಾನಸಭಾ ಕ್ಷೇತ್ರ- ರಮೇಶ್ ಜಾರಕಿಹೊಳಿ
ಯಲ್ಲಾಪುರ ವಿಧಾನಸಭಾ ಕ್ಷೇತ್ರ-ಶಿವರಾಮ್ ಹೆಬ್ಬಾರ್
ಹಿರೇಕೆರೂರು ವಿಧಾನಸಭಾ ಕ್ಷೇತ್ರ- ಬಿ.ಸಿ.ಪಾಟೀಲ್
ವಿಜಯನಗರ ವಿಧಾನಸಭಾ ಕ್ಷೇತ್ರ-ಆನಂದ್ ಸಿಂಗ್
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ-ಡಾ.ಕೆ.ಸುಧಾಕರ್
ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರ- ಭೈರತಿ ಬಸವರಾಜ್
ಯಶವಂತಪುರ ವಿಧಾನಸಭಾ ಕ್ಷೇತ್ರ-ಎಸ್.ಟಿ.ಸೋಮಶೇಖರ್
ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರ- ಗೋಪಾಲಯ್ಯ
ಹೊಸಕೋಟೆ ವಿಧಾನಸಭಾ ಕ್ಷೇತ್ರ- ಎಂಟಿಬಿ ನಾಗರಾಜ್
ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರ- ಕೆ.ಸಿ.ನಾರಾಯಣಗೌಡ
ಹುಣಸೂರು ವಿಧಾನಸಭಾ ಕ್ಷೇತ್ರ- ಎಚ್.ವಿಶ್ವನಾಥ್
ಈ ಮಧ್ಯೆ, ಅನರ್ಹ ಶಾಸಕ ರೋಶನ್ ಬೇಗ್ ಶಿವಾಜಿನಗರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇನ್ನು ಆರ್.ಶಂಕರ್ ರಾಣಿಬೆನ್ನೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಇಬ್ಬರಿಗೂ ಇನ್ನು ಟಿಕೆಟ್ ಸಿಕ್ಕಿಲ್ಲ. ಈ ಎರಡೂ ಕ್ಷೇತ್ರಗಳಿಗೆ ಬಿಜೆಪಿಯಿಂದ ಇನ್ನು ಯಾರಿಗೆ ಟಿಕೆಟ್ ಸಿಗಲಿದೆ ಎಂಬುದು ಗೌಪ್ಯವಾಗಿ ಉಳಿದಿದೆ. ಮತ್ತೊಂದೆಡೆ ರಾಣಿಬೆನ್ನೂರು ಕ್ಷೇತ್ರದಿಂದ ಸಚಿವ ಈಶ್ವರಪ್ಪ ಅವರ ಪುತ್ರ ಕಾಂತೇಶ್ ಗೆ ಟಿಕೆಟ್ ನೀಡುವಂತೆ ಸಾಕಷ್ಟು ಒತ್ತಡ ಹೇರಲಾಗಿತ್ತು. ಆದರೆ, ಈ ಕುರಿತು ಇನ್ನು ಅಂತಿಮ ನಿರ್ಧಾರ ಕೈಗೊಂಡಿಲ್ಲ…
Comments are closed.