ಕರಾವಳಿ

ಅಪ್ರಾಪ್ತ ವಿದ್ಯಾರ್ಥಿನಿಯ ಅತ್ಯಾಚಾರ: ಕೋಟ ಪೊಲೀಸರಿಂದ ಆರೋಪಿ ಬಂಧನ

Pinterest LinkedIn Tumblr

ಕುಂದಾಪುರ: ಅಪ್ರಾಪ್ತ ವಯಸ್ಸಿನ ದಲಿತ ವಿದ್ಯಾರ್ಥಿನಿಗೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಬಂಧಿಸಿದ ಘಟನೆ ಸೋಮವಾರ ಕೋಟ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಹಂಗಾರಕಟ್ಟೆ ನಿವಾಸಿ ಅಶೋಕ ಪೂಜಾರಿ(33) ಅತ್ಯಾಚಾರ ನಡೆಸಿದ ಆರೋಪಿ.

ಆರೋಪಿ ಅಶೋಕ ವಿವಾಹಿತನಾಗಿದ್ದು ಇಬ್ಬರು ಮಕ್ಕಳಿದ್ದಾರೆ. ಕೆಲವು ಸಮಯಗಳ ಹಿಂದೆ ಪತ್ನಿಯನ್ನು ತ್ಯಜಿಸಿದ್ದ ಎನ್ನಲಾಗಿದೆ. ಭಾನುವಾರದಂದು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಕಾರಿನಲ್ಲಿ ಸಾಸ್ತಾನದಿಂದ ಎರಡು ಕಿ.ಮೀ ದೂರದಲ್ಲಿರುವ ಮನೆಯೊಂದಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ ಎಂದು ಸಂತ್ರಸ್ಥ ಬಾಲಕಿ ಪೊಲೀಸರಿಗೆ ನೀಡಿದ್ದ ದೂರಿನಲ್ಲಿ ತಿಳಿಸಿದ್ದಾಳೆ. ಆರೋಪಿ ಅಶೋಕ ಪೂಜಾರಿಯನ್ನು ಬಂಧಿಸಿದ ಕೋಟ ಪೊಲೀಸರು ಫೋಕ್ಸೋ ಮತ್ತು ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಆರೋಪಿ ಅಶೋಕ ಪೂಜಾರಿ ಅಪರಾಧ ಚಟುವಟಿಕೆ ಹಿನ್ನೆಲೆಯುಳ್ಳವನಾಗಿದ್ದು ಅಕ್ರಮ ಮರಳು ಸಾಗಾಟದ ಪ್ರಕರಣವೂ ಈತನ ಮೇಲಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.