ಕರ್ನಾಟಕ

ಜೆಡಿಎಸ್ ಭದ್ರಕೋಟೆಗೆ ಲಗ್ಗೆ ಇಟ್ಟ ಬಿಜೆಪಿ; ಕೆಆರ್ ಪೇಟೆ ಕ್ಷೇತ್ರದಲ್ಲಿ ಬಿಜೆಪಿಯಿಂದ ನಾರಾಯಣ ಗೌಡ ಗೆಲುವು

Pinterest LinkedIn Tumblr

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಮಲ ಪಕ್ಷ, ಕಮಾಲ್ ಮಾಡಿದೆ.

ರೈತರ ಪಕ್ಷವೆಂದು ಬಿಂಬಿಸಿಕೊಂಡಿದ್ದ ಜೆಡಿಎಸ್ ಉಪ ಚುನಾವಣೆಯ 14 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು, ಆದರೆ ಒಂದು ಕ್ಷೇತ್ರವನ್ನು ಜೆಡಿಎಸ್ ಗೆಲ್ಲಿಸಿಕೊಳ್ಳಲು ಸಾಧ್ಯವಾಗಿಲ್ಲ, ಜೆಡಿಎಸ್ ಭದ್ರಕೋಟೆ ಎಂದೇ ಪರಿಗಣಿತವಾಗಿರುವ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರಾಭವಗೊಂಡಿದ್ದಾರೆ, ಕೊನೆ ಪಕ್ಷ ಯಶವಂತಪುರದಲ್ಲಿ ಜೆಡಿಎಸ್ ಗೆಲ್ಲಬಹುದೆಂಬ ನೀರಿಕ್ಷೆ ಕೂಡ ಹುಸಿಯಾಗಿದೆ.

ಸಿಎಂ ಯಡಿಯೂರಪ್ಪ ತವರು ಜಿಲ್ಲೆ ಮಂಡ್ಯದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿದೆ. ಕೆಆರ್ ಪೇಟೆ ಕ್ಷೇತ್ರದಲ್ಲಿ ಬಿಜೆಪಿಯಿಂದ ನಾರಾಯಣ ಗೌಡ ಗೆಲುವು ಸಾಧಿಸಿದೆ.

ಇನ್ನೂ ಹೊಸಕೋಟೆ ವಿಧಾನ ಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಎಂಟಿಬಿ ನಾಗರಾಜ್ ಅವರಿಗೆ ತೀವ್ರ ಮುಖಭಂಗವಾಗಿದೆ, ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಗೆಲುವು ಸಾಧನಸಿದ್ದಾರೆ. ಒಟ್ಟಾರೆ ಉಪ ಚುನಾವಣೆ ಫಲಿತಾಂಶದಿಂದ ಬಿಎಸ್ ಯಡಿಯೂರಪ್ಪ ಅವರ ಸರ್ಕಾರ ಸದ್ಯಕ್ಕೆ ಸೇಫ್ ಆಗಿದೆ.

Comments are closed.