ರಾಷ್ಟ್ರೀಯ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾರಿಂದ ರಾಜ್ಯದ ಜನತೆಗೆ ಧನ್ಯವಾದ ಸಮರ್ಪಣೆ

Pinterest LinkedIn Tumblr


ಬೆಂಗಳೂರು: ಕರ್ನಾಟಕ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಒಟ್ಟು 15 ಸ್ಥಾನಗಳ ಪೈಕಿ 12 ಸ್ಥಾನಗಳಲ್ಲಿ ಜಯಭೇರಿ ಭಾರಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಸಂಭ್ರಮದ ವಾತಾವರಣ ಏರ್ಪಟ್ಟಿದ್ದು, ರಾಜಕೀಯ ಧುರೀಣರು ಹರ್ಷೋದ್ಘಾರ ವ್ಯಕ್ತಪಡಿಸಿದ್ದಾರೆ. ಮುಖ್ಯ ಮಂತ್ರಿ ಯಡಿಯೂರಪ್ಪ ಅವರ ಈ ಸಾಧನೆಗೆ ರಾಷ್ಟ್ರಾದ್ಯಂತ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇದೀಗ ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರಾಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ನಿರ್ಣಾಯಕ ಉಪಚುನಾವಣೆ ಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಸರಕಾರವನ್ನು ಸುಭದ್ರಗೊಳಿಸಿದ್ದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಉಪಚುನಾವಣೆಯದಲ್ಲಿ ಬಿಜೆಪಿ ಮತ್ತೆ ಜಯಭೇರಿ ಭಾರಿಸಲು ಕಾರಣವಾದ ಸಿಎಂ ಯಡಿಯೂರಪ್ಪ, ನಳಿನ್‌ಕುಮಾರ್‌ ಕಟೀಲ್‌ ಹಾಗೂ ಪಕ್ಷದ ಕಾರ್ಯರ್ತರಿಗೆ ಅಭಿನಂದನೆಗಳು. ಬಿಜೆಪಿ ಪಕ್ಷದ ಮೇಲೆ ಅಚಲ ನಂಬಿಕೆ ಇಟ್ಟಿರುವ ಕರ್ನಾಟಕದ ಜನತೆಗೆ ಧನ್ಯವಾದಗಳು. ನಮ್ಮ ಸರಕಾರವು ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಕರ್ನಾಟಕದ ಅಭಿವೃದ್ಧಿ ಸಾಗಲಿದೆ ಎಂದು ಅಮಿತ್‌ ಶಾ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

Comments are closed.