ಕರ್ನಾಟಕ

ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ: ಯಡಿಯೂರಪ್ಪ

Pinterest LinkedIn Tumblr


ಬೆಂಗಳೂರು: ಪೌರತ್ವ ತಿದ್ದುಪಡಿ ‌ಕಾಯ್ದೆಯಿಂದ ಅಲ್ಪಸಂಖ್ಯಾತ ಮುಸ್ಲಿಮರಿಗೆ ಯಾವುದೇ ಸಮಸ್ಯೆಯಾಗದು. ಯಾರೂ ಸಹ ಆತಂಕ ಪಡಬೇಕಿಲ್ಲ. ಪೌರತ್ವ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಪಕ್ಷದ ಕೈವಾಡವಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಗುರುವಾರ ಪ್ರತಿಕ್ರಿಯಿಸಿದ ಅವರು, ಮಾಜಿ ಸಚಿವ ಯು.ಟಿ‌. ಖಾದರ್ ಅಂತಹವರು ಜನರನ್ನು ಪ್ರಚೋದಿಸುವ ‌ಕೆಲಸ ಮಾಡುತ್ತಿದ್ದಾರೆ. ಇಂತಹ ಪ್ರಚೋದನೆಗೆ ಜನ ತಲೆಕೆಡಸಿಕೊಳ್ಳಬಾರದು.‌ ಈಗಾಗಲೇ ನಿಷೇಧಾಜ್ಙೆ ಜಾರಿಗೊಳಿಸಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಯಾವುದೇ ಮೆರವಣಿಗೆ, ಪ್ರತಿಭಟನೆಗೆ ಅವಕಾಶ‌ ನೀಡಿಲ್ಲ ಎಂದು ತಿಳಿಸಿದರು.

ಸಂಪುಟ ವಿಸ್ತರಣೆ ಸಂಬಂದ ಡಿಸೆಂಬರ್ 22ರ ಬಳಿಕ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

Comments are closed.