ಚಿಕ್ಕಮಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಮಲೆನಾಡಿನಲ್ಲೂ ಇಂಟರ್ನೆಟ್ ಸೇವೆಗಳನ್ನು ಸ್ಥಗಿತ ಮಾಡಲಾಗಿದೆ.
ವಿರೋಧಿ ಪ್ರತಿಭಟನೆ ಮಂಗಳೂರಿನಲ್ಲಿ ಹಿಂಸಾತ್ಮಕ ರೂಪ ಪಡೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 48 ಗಂಟೆಗಳ ಕಾಲ ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಚಿಕ್ಕಮಗಳೂರಿನ ಮೂಡಿಗೆರೆ, ಎನ್ ಆರ್ ಪುರ, ಬಾಳೆಹೊನ್ನೂರು, ಕೊಪ್ಪ, ಶೃಂಗೇರಿಗಳಲ್ಲೂ ಇಂಟರ್ನೆಟ್ ಸೇವೆಯನ್ನು ತಡೆಹಿಡಿಯಲಾಗಿದೆ.
ದೇಶದ ಹಲವೆಡೆ ಇದೇ ರೀತಿ ಇಂಟರ್ನೆಟ್ ಸೇವೆಗಳನ್ನು ಕಡಿತಗೊಳಿಸಿದ್ದು, ಉತ್ತರ ಪ್ರದೇಶದ 10 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ನಿಲ್ಲಿಸಲಾಗಿದೆ. ಅಲ್ಲಿ ಖಾಸಗಿ ಸುದ್ದಿ ವಾಹಿನಿಗಳ ಪ್ರಸಾರಕ್ಕೂ ಕಡಿವಾಣ ಹಾಕಲಾಗಿದೆ.
Comments are closed.